ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಯೋಧ್ಯೆಗೆ ಪ್ರಯಾಣ ಬೆಳೆಸಿದ ದೇವೇಗೌಡರ ಕುಟುಂಬ

ನಾಳೆ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡ್ರ ಕುಟುಂಬಕ್ಕೆ ಆಹ್ವಾನ ನೀಡಲಾಗಿದ್ದು, ಹಾಗಾಗಿ ದೇವೇಗೌಡ್ರ ಕುಟುಂಬ ವಿಶೇಷ ವಿಮಾನದಲ್ಲಿ ತೆರಳಿದರು.
04:50 PM Jan 21, 2024 IST | Ashika S

ಬೆಂಗಳೂರು: ನಾಳೆ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೆ ಆಹ್ವಾನ ನೀಡಲಾಗಿದ್ದು, ಹಾಗಾಗಿ ದೇವೇಗೌಡ್ರ ಕುಟುಂಬ ವಿಶೇಷ ವಿಮಾನದಲ್ಲಿ ತೆರಳಿದರು.

Advertisement

ಈ ಮುನ್ನ ಮಾತಾಡಿದ ದೇವೇಗೌಡ್ರು, ಅಯೋಧ್ಯೆಯಲ್ಲಿ ನಡೆಯೋ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕಾಶ್ಮೀರದ ಮುಸ್ಲಿಮರು ಹೂವು ಕಳಿಸಿದ್ದಾರೆ. ಪಶ್ಚಿಮ ಬಂಗಾಳದ ಜನ ಕೂಡ ಹೂವಿನ ಮಾಲೆ ಕಟ್ಟಿಕೊಟ್ಟಿದ್ದಾರೆ. ಅನೇಕ ರಾಜ್ಯಗಳಿಂದ ಅಯೋಧ್ಯೆಗೆ ವಿಶೇಷ ಉಡುಗೊರೆಗಳು ಬಂದಿವೆ. ಹಿಂದೂಗಳು ಬಿಡಿ, ಮುಸ್ಲಿಮರೇ ಹೂವು ಮಳೆ ಸುರಿಸುತ್ತಿದ್ದಾರೆ. ಎಲ್ಲರೂ ಎಲ್ಲವನ್ನೂ ಅರ್ಥ ಮಾಡಿಕೊಳ್ಳಬೇಕಿದೆ. ಯಾರಿಗೆ ಯಾರು ಪ್ರೇರಣೆ ಮಾಡಲ್ಲ ಎಂದರು.

ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮಾಜಿ ಪ್ರಧಾನಿಗಳಾದ ಮಾನ್ಯ  ಹೆಚ್.ಡಿ.ದೇವೇಗೌಡರು, ಅವರ ಧರ್ಮಪತ್ನಿ ಚನ್ನಮ್ಮನವರು, ಮಾಜಿ ಮುಖ್ಯಮಂತ್ರಿಗಳಾದ  ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಅಯೋಧ್ಯೆಗೆ ಪ್ರಯಾಣ ಬೆಳೆಸಿದರು.

Advertisement

 

Advertisement
Tags :
LatetsNewsNewsKannadaಕಾರ್ಯಕ್ರಮಕುಟುಂಬಪ್ರಾಣ ಪ್ರತಿಷ್ಠಾಪನೆಮಾಜಿ ಪ್ರಧಾನಿವಿಶೇಷ ವಿಮಾನ
Advertisement
Next Article