ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೇಂದ್ರ ಬಜೆಟ್‌ನಲ್ಲಿ ಮಾಲ್ಡೀವ್ಸ್‌ಗೆ ಬಿಗ್‌ ಶಾಕ್ ಕೊಟ್ಟ ಪ್ರಧಾನಿ ಮೋದಿ

ಲಕ್ಷದ್ವೀಪದ ಪ್ರವಾಸಕ್ಕೆ ಕರೆ ಕೊಟ್ಟು ಮಾಲ್ಡೀವ್ಸ್‌ಗೆ ಬಿಗ್‌ ಶಾಕ್ ಕೊಟ್ಟಿದ್ದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. 2024ರ ಕೇಂದ್ರ ಬಜೆಟ್‌ನಲ್ಲಿ ಲಕ್ಷದ್ವೀಪದ ಅಭಿವೃದ್ಧಿಯ ಬಗ್ಗೆ ಮಹತ್ವದ ಪ್ರಸ್ತಾಪ ಮಾಡಿದೆ.
12:42 PM Feb 01, 2024 IST | Ashitha S

ದೆಹಲಿ:  ಲಕ್ಷದ್ವೀಪದ ಪ್ರವಾಸಕ್ಕೆ ಕರೆ ಕೊಟ್ಟು ಮಾಲ್ಡೀವ್ಸ್‌ಗೆ ಬಿಗ್‌ ಶಾಕ್ ಕೊಟ್ಟಿದ್ದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. 2024ರ ಕೇಂದ್ರ ಬಜೆಟ್‌ನಲ್ಲಿ ಲಕ್ಷದ್ವೀಪದ ಅಭಿವೃದ್ಧಿಯ ಬಗ್ಗೆ ಮಹತ್ವದ ಪ್ರಸ್ತಾಪ ಮಾಡಿದೆ.

Advertisement

ಲೋಕಸಭೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024ನೇ ಸಾಲಿಗೆ ಮಧ್ಯಂತರ ಬಜೆಟ್ ಮಂಡನೆ ಮಾಡಿದರು. ಆಯವ್ಯಯದಲ್ಲಿ ಲಕ್ಷದ್ವೀಪದ ಬಗ್ಗೆ ಪ್ರಸ್ತಾಪ ಮಾಡಿದ್ದು ವಿಶೇಷವಾಗಿತ್ತು. ದೇಶದ ಪ್ರವಾಸಿತಾಣಗಳ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ತಿಳಿಸಿದ ಕೇಂದ್ರ ಸರ್ಕಾರ ಲಕ್ಷದ್ವೀಪದ ಪ್ರವಾಸೋದ್ಯಮಕ್ಕೆ ವಿಶೇಷ ಒಲವು ತೋರಿದೆ.

ಲಕ್ಷದ್ವೀಪವನ್ನು ಪ್ರಮುಖ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಗೊಳಿಸುವುದಾಗಿ ಬಜೆಟ್‌ನಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದರು. ಅದರಲ್ಲಿ ಬಂದರು ಸಂಪರ್ಕ, ಪ್ರವಾಸೋದ್ಯಕ್ಕೆ ಅಗತ್ಯವಾದ ಮೂಲಭೂತ ಸೌಕರ್ಯ ಕಲ್ಪಿಸುವ ಭರವಸೆ ನೀಡಿಲಾಗಿದೆ.  ಅಲ್ಲಿನ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದಿಂದ ಹಣ ನೀಡಲಾಗುವುದು. ಪ್ರವಾಸೋಧ್ಯಮ ಕ್ಷೇತ್ರದಲ್ಲಿ ಭಾರಿ ಬದಲಾವಣೆ ತರಲಾಗುವುದು ಎಂದರು.

Advertisement

Advertisement
Tags :
GOVERNMENTindiaLatestNewsNewsKannadaಪ್ರಧಾನಿ ಮೋದಿಬೆಂಗಳೂರುಮಾಲ್ಡೀವ್ಸ್
Advertisement
Next Article