ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಉಡುಪಿ: ಮಲಬಾರ್ ಗೋಲ್ಡ್ ವತಿಯಿಂದ 266 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ವಿತರಣೆ

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಸಂಸ್ಥೆಯ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲೆಯ ಸುಮಾರು 40 ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳ 266 ವಿದ್ಯಾರ್ಥಿನಿಯರಿಗೆ 15ಲಕ್ಷ ಮೊತ್ತದ ವಿದ್ಯಾರ್ಥಿ ವೇತನವನ್ನು ಬನ್ನಂಜೆ ಶ್ರೀನಾರಾಯಣಗುರು ಸಭಾಭವನದಲ್ಲಿ ವಿತರಿಸಲಾಯಿತು.
01:14 PM Feb 25, 2024 IST | Gayathri SG

ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಸಂಸ್ಥೆಯ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲೆಯ ಸುಮಾರು 40 ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳ 266 ವಿದ್ಯಾರ್ಥಿನಿಯರಿಗೆ 15ಲಕ್ಷ ಮೊತ್ತದ ವಿದ್ಯಾರ್ಥಿ ವೇತನವನ್ನು ಬನ್ನಂಜೆ ಶ್ರೀನಾರಾಯಣಗುರು ಸಭಾಭವನದಲ್ಲಿ ವಿತರಿಸಲಾಯಿತು.

Advertisement

ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿವೇತನ ವಿತರಿಸಿದ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯ ಪ್ರಕಾಶ್ ಹೆಗ್ಡೆ ಮಾತನಾಡಿ, ಮಲಬಾರ್ ಗೊಲ್ಡ್ ಅರ್ಹರಿಗೆ ಎಲ್ಲ ರೀತಿಯಲ್ಲೂ ಸಹಾಯ ನೀಡುತ್ತಿದೆ. ಮನೆ ನಿರ್ಮಾಣ, ರೋಗಿಗಳಿಗೆ ಧನಸಹಾಯ, ಕೋವಿಡ್ ಸಂದರ್ಭದಲ್ಲಿ ಕಿಟ್ ವಿತರಿಸುವ ಮೂಲಕ ಸಮಾಜಕ್ಕೆ ಮಾನವೀಯ ನೆಲೆಯಲ್ಲಿ ಸ್ಪಂದಿಸಿದೆ ಎಂದು ಹೇಳಿದರು.

ಸಮಾಜದಲ್ಲಿರುವ ಕಟ್ಟಕಡೆಯ ವ್ಯಕ್ತಿಯ ಬಗ್ಗೆಯೂ ನಾವು ಯೋಚನೆ ಮಾಡಬೇಕು. ಮಲಬಾರ್ ಗೋಲ್ಡ್ ನೀಡಿದ ವಿದ್ಯಾರ್ಥಿವೇತನದಿಂದ ಭವಿಷ್ಯದಲ್ಲಿ ಸಾಧನೆ ಮಾಡಿ ಉನ್ನತ ಹುದ್ದೆಗಳನ್ನು ಪಡೆಯುವ ವಿದ್ಯಾರ್ಥಿಗಳು ಮುಂದೆ ಸಮಾಜದ ಬಗ್ಗೆಯೂ ಚಿಂತನೆ ಮಾಡಬೇಕು. ಆಗ ಇದೇ ರೀತಿಯ ನೆರವಿನ ನಿರೀಕ್ಷೆಯನ್ನು ಸಮಾಜ ಕೂಡ ನಿಮ್ಮಿಂದ ಮಾಡುತ್ತಿರುತ್ತದೆ ಎಂದರು.

Advertisement

ಮಕ್ಕಳಲ್ಲಿರುವ ಶಕ್ತಿ, ಕೌಶಲ್ಯಗಳು ಸಮಾನತೆಯನ್ನು ಮೂಡಿಸಲ್ಲ. ನಾವೆಲ್ಲ ಒಂದಾಗಿರಬೇಕೆಂಬ ಬದ್ಧತೆಯೇ ಮಕ್ಕಳಲ್ಲಿರುವ ನಿಜವಾದ ಸಮಾನತೆ ಆಗಿದೆ. ಜಾತಿ ಧರ್ಮ ಮೀರಿದ ಸಂಬಂಧವೇ ಮಕ್ಕಳಲ್ಲಿ ಶಾಶ್ವತವಾಗಿರುತ್ತದೆ. ಆ ಸಂಬಂಧ ಸಮಾಜದ ಮುಂದಿನ ಪೀಳಿಗೆಗೂ ಉಳಿಯಲಿ ಎಂದು ಅವರು ಹಾರೈಸಿದರು.

ಈ ಸಂದರ್ಭದಲ್ಲಿ ಮಲಬಾರ್ ಚಾರಿಟೇಬಲ್ ಟ್ರಸ್ಟ್‌ನ ಹಸಿವು ಮುಕ್ತ ಜಗತ್ತು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಮಾತನಾಡಿ, ಹಸಿವು ಮುಕ್ತ ಜಗತ್ತು ಬಹಳ ಉತ್ತಮ ಕಾರ್ಯಕ್ರಮ ವಾಗಿದ್ದು, ಇದೇ ರೀತಿಯ ಕಾರ್ಯಕ್ರಮ ಇನ್ನಷ್ಟು ಸಂಸ್ಥೆಗಳು ಮಾಡಿದರೆ ಇಡೀ ಜಗತ್ತನ್ನು ಹಸಿವು ಮುಕ್ತ ಮಾಡಬಹುದಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಉಡುಪಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ನಿವೃತ್ತ ಪ್ರಾಂಶುಪಾಲ ಡಾ.ಜೆರಾಲ್ಡ್ ಪಿಂಟೋ, ಸಮಾಜ ಸೇವಕರಾದ ಫಾರೂಕ್ ಚಂದ್ರನಗರ, ನಿತ್ಯಾನಂದ ಒಳಕಾಡು, ಹಾಸ್ಯ ಭಾಷಣಗಾರ್ತಿ ಸಂಧ್ಯಾ ಶೆಣೈ, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷ ಅಂಪಾರು ಜಗನ್ನಾಥ ಶೆಟ್ಟಿ ಮಾತನಾಡಿದರು. ವೇದಿಕೆಯಲ್ಲಿ ಮಲಬಾರ್ ಗೋಲ್ಡ್ ಉಡುಪಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಪ್ರಾದೇಶಿಕ ಸಿಎಸ್‌ಆರ್ ಉಸ್ತುವಾರಿ ಹೈದರ್ ಕೆ.ಎ., ಪ್ರಮುಖ ರಾದ ಪುರಂದರ ತಿಂಗಳಾಯ, ರಾಘವೇಂದ್ರ ನಾಯಕ್, ತಂಝೀಮ್ ಶಿರ್ವ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಾಘವೇಂದ್ರ ಕಾರ್ವಾಲು ಸ್ವಾಗತಿಸಿ, ವಿಘ್ನೇಶ್ ನಿರೂಪಿಸಿ ವಂದಿಸಿದರು.

Advertisement
Tags :
LatestNewsNewsKannadaಉಡುಪಿ
Advertisement
Next Article