ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಬಗ್ಗೆ ಬಿಜೆಪಿ ಶಾಸಕನ ಅಸಮಾಧಾನ !

 ದಕ್ಷಿಣ ಕನ್ನಡ ಜಿಲ್ಲೆಯ ಶಾಸಕನೋರ್ವನಿಂದ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತನ್ನ ಸಮಾಜದ ಕಾಂಗ್ರೆಸ್ ನಾಯಕ ಸೋತ ಕಾರಣಕ್ಕೆ ಬಿಜೆಪಿ ಶಾಸಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸೋತ ಕಾರಣಕ್ಕೆ ಕಳವಳಗೊಂಡ ಮೂಲ್ಕಿ-ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
01:18 PM Mar 12, 2024 IST | Nisarga K
ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಬಗ್ಗೆ ಬಿಜೆಪಿ ಶಾಸಕನ ಅಸಮಾಧಾನ !

ಮಂಗಳೂರು:   ದಕ್ಷಿಣ ಕನ್ನಡ ಜಿಲ್ಲೆಯ ಶಾಸಕನೋರ್ವನಿಂದ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತನ್ನ ಸಮಾಜದ ಕಾಂಗ್ರೆಸ್ ನಾಯಕ ಸೋತ ಕಾರಣಕ್ಕೆ ಬಿಜೆಪಿ ಶಾಸಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸೋತ ಕಾರಣಕ್ಕೆ ಕಳವಳಗೊಂಡ ಮೂಲ್ಕಿ-ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಹೇಳಿಕೆ ನೀಡಿದ ಅವರು, ಚುನಾವಣೆ ಎದುರಿಸುವ ಬಿಲ್ಲವ ಅಭ್ಯರ್ಥಿಗಳಿಗೆ ಪಕ್ಷ ಭೇಧ ಮರೆತು ಬೆಂಬಲ ನೀಡುವಂತೆ ಕರೆ ನೀಡಿದ್ದಾರೆ. ಪಕ್ಷ ಯಾವುದಾದರೂ ಪರವಾಗಿಲ್ಲ ಬಿಲ್ಲವ ಅಭ್ಯರ್ಥಿಗಳನ್ನ ಗೆಲ್ಲಿಸಿ ಎಂಬ ರೀತಿಯಲ್ಲಿ ಕರೆ ನಿಡಿದ್ದಾರೆ.

ಬಿಲ್ಲವರ ಮಹಾ ಮಂಡಲದ ಸಮಾವೇಶದಲ್ಲಿ ಮಾತನಾಡಿದ ಅವರು, ಬೆಳ್ತಂಗಡಿಯಲ್ಲಿ ಬಿಲ್ಲವ ಅಭ್ಯರ್ಥಿ ರಕ್ಷಿತ್ ಶಿವರಾಂ ಚುನಾವಣೆ ಎದುರಿಸಿ ಸೋತಿದ್ದಾರೆ. ದ. ಕ ಜಿಲ್ಲೆಯಲ್ಲಿ ಬಹು ಸಂಖ್ಯಾತ ಬಿಲ್ಲವರೇ ಇರುವಾಗ ರಕ್ಷಿತ್ ಯಾಕೆ ಸೋತಿದ್ದಾರೆ ? ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಕೊಡೋದಕ್ಕೆ ನಿಮಗೆ ಧೈರ್ಯ ಬರೋದಿಲ್ಲ ಉಮಾನಾಥ್ ಕೋಟ್ಯಾನ್ ಹತ್ರ ಮಾತನಾಡಿದ್ರೆ ನನ್ನ ಪಕ್ಷದವರು ಏನಾದ್ರೂ ಹೇಳ್ತಾರಾ ಎಂಬ ಭಯ ಅಥವಾ ಕಾಂಗ್ರೆಸ್ ನ ವಿನಯ ಕುಮಾರ್ ಸೊರಕೆ ಹತ್ರ ಮಾತನಾಡಿದ್ರೆ ಏನಾದರೂ ತೊಂದರೆಯಾಗ್ತಾದ ಎಂಬ ಭಯ ಇರಬೇಕು.

Advertisement

ಇಂತಹ ಹಿಂಜರಿಕೆ ಇಟ್ಟುಕೊಂಡರೆ ಬಿಲ್ಲವ ಸಮಾಜ ಕಟ್ಟಲು ಹೇಗೆ ಸಾಧ್ಯ ? ಅದ್ಯಾಕೆ ಬಿಲ್ಲವ ಸಮಾಜದವರಿಗೆ ಈ ಹಿಂಜರಿಕೆ ? ಚುನಾವಣೆ ಎದುರಿಸುವ ನಮ್ಮ ಜನಪ್ರತಿನಿಧಿಗಳಿಗೆ ಬಿಲ್ಲವ ಸಮಾಜ ಎಷ್ಟು ನೈತಿಕ ಬೆಂಬಲ ನೀಡುತ್ತೆ ಅನ್ನೋದು ಮುಖ್ಯ. ಯಾವುದೇ ರಾಜಕೀಯ ಪಕ್ಷವಿರಲಿ ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ನೀಡಿ ಎಂದು ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿಕೆ

Advertisement
Tags :
BillavasBJPCANDIDATECongressDEFEATLatestNewsNewsKannadaPOLITICS
Advertisement
Next Article