ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜಿಲ್ಲಾ ಕೇಂದ್ರ ಸಹಕಾರಿ ಸಂಘಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳ ಹಾಗೂ ನವೋದಯ ಸ್ವಸಹಾಯ ಸಂಘಗಳ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಗುರುವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.
04:37 PM Nov 30, 2023 IST | Ashika S

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಸಂಘಗಳ ಹಾಗೂ ನವೋದಯ ಸ್ವಸಹಾಯ ಸಂಘಗಳ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಗುರುವಾರ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.

Advertisement

ರಾಜ್ಯ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಕ್ರೀಡಾಜ್ಯೋತಿ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿ, ಮಹಿಳೆಯರಲ್ಲಿ ಆರ್ಥಿಕ ಸಬಲೀಕರಣದ ಜತೆ ಸ್ವಾವಲಂಬಿ ಜೀವನ ನಡೆಸಲು ಸಹಕಾರಿ ಕ್ಷೇತ್ರದ ಮೂಲಕ ಅನುವು ಮಾಡಿ ಕೊಟ್ಟಿರುವುದು ಅದ್ಭುತ ಕೆಲಸ. ಸುಮಾರು 15 ಸಾವಿರ ಮಂದಿ ಪಾಲ್ಗೊಳ್ಳುವ ಮೂಲಕ ಕ್ರೀಡಾಕೂಟಕ್ಕೆ ಹೊಸ ಆಯಾಮವನ್ನು ಎಂ.ಎನ್.ರಾಜೇಂದ್ರ ಕುಮಾರ್ ತಂದಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಏನನ್ನೂ ಸಾಧಿಸಬಹುದು ಎಂಬುದಕ್ಕೆ ಇಂದಿನ ಕ್ರೀಡಾಕೂಟ ಸಾಕ್ಷಿ ಎಂದ ಅವರು, ಸೌಹಾರ್ದತೆ ಸಹಕಾರಿ ರಂಗದಲ್ಲಿ ಮಾತ್ರ ಸಾಧ್ಯ ಎಂದು ಹೇಳಿದರು.

ಇದೆ ಸಂದರ್ಭದಲ್ಲಿ ಬಲೂನ್ ಹಾರಿಸುವ ಮೂಲಕ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆಯನ್ನು ಅತಿಥಿಗಳು ನೀಡಿದರು.

Advertisement

ಸಂಸದ ನಳಿನ್ ಕುಮಾರ್ ಕಟೀಲ್ ಮೆರವಣಿಗೆ ಉದ್ಘಾಟಿಸಿ, ಧ್ವಜಾರೋಹಣ ಮಾಡಿ, ಗ್ರಾಮೀಣ ಮಟ್ಟದಲ್ಲಿ ಒಲಿಪಿಂಗ್ ಮಾದರಿಯಲ್ಲಿ ಕ್ರೀಡಾಕೂಟ ಆಯೋಜನೆ ಮಾಡಬಹುದು ಎಂಬುದಕ್ಕೆ ಇಂದಿನ ಕ್ರೀಡಾಕೂಟ ಸಾಕ್ಷಿ. ಇದು ಸ್ವರ್ಣಾಕ್ಷರದಲ್ಲಿ ಬರೆದಿಡುವ ಸ್ಮರಣೀಯ ದಿನವಾಗಿದೆ ಎಂದ ಅವರು, ಹಳ್ಳಿ ಹಳ್ಳಿಗಳಲ್ಲೂ ಮಹಿಳೆಯರಲ್ಲಿ ಆರ್ಥಿಕ ಸಬಲತೆಯನ್ನು ಕಾಡುವಂತಾಗಲು ರಾಜೇಂದ್ರ ಕುಮಾರ್ ಅವರ ಸಾಧನೆ ಮಹತ್ತರವಾದದ್ದು. ಇನ್ನಷ್ಟು ಅವರ ಕಾರ್ಯ ಬೆಳಗಲಿ ಎಂದರು.

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಾವುದೇ ಒಂದು ಕ್ಷೇತ್ರ ಯಶಸ್ವಿಯಾಗಲು ಕೆಲಸ ಮಾಡುವ ಜತೆಗೆ ಒಂದು ಕೈ ಮತ್ತೊಂದು ಕೈ ಜೋಡಿಸಿದರೆ ಮಾತ್ರ ಸಾಧ್ಯ. ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಳ್ಳಬೇಕು ಎಂಬ ನಿಟ್ಟಿನಲ್ಲಿ ನವೋದಯ ಚಾರಿಟೇಬಲ್ ಟ್ರಸ್ಟ್ ರಚನೆಯಾಗಿದೆ ಎಂದ ಅವರು, ಕ್ರೀಡೆಯಲ್ಲಿ ರಾಜಕೀಯ ಸಲ್ಲದು. ಎಲ್ಲರೂ ಒಗ್ಗಟ್ಟಾಗಿ ಶ್ರಮಿಸೋಣ ಎಂದರು.

ಈ ಸಂದರ್ಭದಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ಶಾಸಕ ಅಶೋಕ್ ಕುಮಾರ್ ರೈ, ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್, ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು ಅವರನ್ನು ಸನ್ಮಾನಿಸಲಾಯಿತು. ಹಿರಿಯ ಕ್ರೀಡಾಪಟು, ನಿರ್ವತ ಶಿಕ್ಷಕ ದಯಾನಂದ ಕೊರ್ಮಡ ಮತ್ತು ಪ್ರೇಮಾನಂದ ಶೆಟ್ಟಿ ಕಾವು ಇವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಸ್ವಸಹಾಯ ಸಂಘಗಳ ಸುಮಾರು15 ಸಾವಿರ ಸದಸ್ಯರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಬಂಟ್ವಾಳ, ಮಂಗಳೂರು, ಪುತ್ತೂರು, ಬೆಳ್ತಂಗಡಿ, ಸುಳ್ಯ ತಾಲೂಕುಗಳಿಂದ ನವೋದಯ ಸದಸ್ಯರು ಪಾಲ್ಗೊಂಡಿದ್ದರು.

ವೇದಿಕೆಯಲ್ಲಿ ಕೇಂದ್ರ ಸಹಕಾರಿ ಬ್ಯಾಂಕ್ ನ ರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಮುಖ್ಯ ಅತಿಥಿಯಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ,ಮಾಜಿ ಶಾಸಕ ಸಂಜೀವ ಮಠಂದೂರು,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ರಾಮಕೃಷ್ಣ ಶಾಲಾ ಸಂಚಾಲಕ ಹೇಮನಾಥ ಶೆಟ್ಟಿ ಕಾವು, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು ನಿಕಟ ಪೂರ್ವ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಆದರ್ಶ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷ ಕೆ. ಸೀತಾರಾಮ ರೈ ಸವಣೂರು, ನಗರಸಭೆ ನಿಕಟಪೂರ್ವ ಅಧ್ಯಕ್ಷ ಜೀವಂಧರ್ ಜೈನ್, ಕರಾವಳಿ ಪಾಲ್ಗೊಂಡಿದ್ದರು. ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶೀಲ್ದಾರ್ ಶಿವಶಂಕರ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿರ್ದೇಶಕರು, ಮತ್ತಿತರರು ಉಪಸ್ಥಿತರಿದ್ದರು.

Advertisement
Tags :
LatestNewsNewsKannadaಕೇಂದ್ರ ಸಹಕಾರಿ ಬ್ಯಾಂಕ್ಕ್ರೀಡಾಕೂಟಗ್ರಾಮ ವಿಕಾಸಚಾರಿಟೇಬಲ್ ಟ್ರಸ್ಟ್ದಕ್ಷಿಣ ಕನ್ನಡ
Advertisement
Next Article