ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಡಿಕೆ ಶಿವಕುಮಾರ್ ಆಸ್ತಿ ಗಳಿಕೆ ಕೇಸ್: ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ

ಡಿಸಿಎಂ ಡಿಕೆ ಶಿವಕುಮಾರ್  ಆದಾಯ‌ ಮೀರಿದ ಆಸ್ತಿ ಗಳಿಕೆ ಕೇಸ್​​ಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.
05:42 PM Jan 05, 2024 IST | Ashika S

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್  ಆದಾಯ‌ ಮೀರಿದ ಆಸ್ತಿ ಗಳಿಕೆ ಕೇಸ್​​ಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ವಿರುದ್ಧ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿದೆ.

Advertisement

ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಸರ್ಕಾರ ಸಮ್ಮತಿ ನೀಡಿತ್ತು. ಸಮ್ಮತಿ ಆಧರಿಸಿ ಸಿಬಿಐ ಎಫ್ಐಆರ್ ದಾಖಲಿಸಿತ್ತು. ಈಗ ಸಮ್ಮತಿ ಹಿಂಪಡೆದು ಪ್ರಕರಣ ಲೋಕಾಯುಕ್ತ ಪೊಲೀಸರ ತನಿಖೆಗೆ ನೀಡಲಾಗಿದ್ದು, ಸರ್ಕಾರದ ಕ್ರಮ ಪ್ರಶ್ನಿಸಿ ಸಿಬಿಐನಿಂದ ಅರ್ಜಿ ಸಲ್ಲಿಸಲಾಗಿದೆ.

ಇದೇ ವೇಳೆ ಡಿಕೆ ಶಿವಕುಮಾರ್​ ವಿರುದ್ಧ ಸಿಬಿಐ ತನಿಖೆಗೆ ಸಮ್ಮತಿ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಶಾಸಕ ಯತ್ನಾಳ್​ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕೂಡ ನಡೆಯಲಿದೆ.

Advertisement

ಹೈಕೋರ್ಟ್​​ಗೆ ಸಿಬಿಐ ಅರ್ಜಿ ಸಲ್ಲಿಕೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಅರ್ಜಿ ಸಲ್ಲಿಸುವುದಕ್ಕೆ ಸಿಬಿಐನವರಿಗೆ ಹಕ್ಕಿದೆ. ನಾವು ವಾದ ಮಾಡುತ್ತೇವೆ. ನ್ಯಾಯಲಯದ ಮೇಲೆ ಗೌರವ ಇದೆ. ನ್ಯಾಯಾಲಯ​ ತೀರ್ಮಾನ ಮಾಡುತ್ತೆ ಎಂದು ಹೇಳಿದ್ದಾರೆ.

ಶಿವಕುಮಾರ್ ವಿರುದ್ಧ ಸಿಬಿಐ 2020 ರಲ್ಲಿ ಪ್ರಕರಣ ದಾಖಲಿಸಿದೆ. 2013 ಮತ್ತು 2018 ರ ನಡುವೆ 74 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿಯನ್ನು ಗಳಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಅದು ಆದಾಯಕ್ಕೆ ಅನುಗುಣವಾಗಿಲ್ಲ ಎಂದು ಆರೋಪಿಸಲಾಗಿದೆ. ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿದ ಆಸ್ತಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಈ ಹಿಂದೆ ಸಲ್ಲಿಸಿದ್ದ ಅನುಮತಿಯನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ನವೆಂಬರ್ 23ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಹಿಂದಿನ ಸರ್ಕಾರ ವಿಧಾನಸಭೆಯ ಸ್ಪೀಕರ್ ಅನುಮತಿಯನ್ನು ಪಡೆಯದೇ ಸಿಬಿಐ ತನಿಖೆಗೆ ಅನುಮತಿ ನೀಡಿದ್ದರು. ಹಾಗಾಗಿ, ಅದು ಕಾನೂನು ರೀತಿಯಾಗಿ ಸರಿಯಾಗಿಲ್ಲ. ಈ ಹಿನ್ನೆಲೆ ಅನುಮತಿಯನ್ನು ಹಿಂಪಡೆಯಲು ನಿರ್ಧರಿಸಲಾಗಿತ್ತು. ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ಅಂದರೆ ಜನವರಿ 5ಕ್ಕೆ ಮುಂದೂಡಿದೆ.

Advertisement
Tags :
LatetsNewsNewsKannadaಆದೇಶಆಸ್ತಿಕೇಸ್ಗಳಿಕೆಸರ್ಕಾರಸಿಬಿಐಹೈಕೋರ್ಟ್‌
Advertisement
Next Article