ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದೇವೇಗೌಡರನ್ನು ಹೊಗಳಿದ ಡಿಕೆ ಶಿವಕುಮಾರ್

ಮೇಕೆದಾಟು ಯೋಜನೆ ರಾಜ್ಯಕ್ಕೆ ಅತ್ಯಗತ್ಯವಾಗಿದ್ದು, ಈ ಬಗ್ಗೆ ರಾಜ್ಯದ ಎಲ್ಲ ಪಕ್ಷಗಳೂ ಅಚಲ ನಿರ್ಧಾರ ಪ್ರಣಾಳಿಕೆಯಲ್ಲಿ ಪ್ರಕಟಿಸಲಿ. ರಾಜ್ಯದ ಎಲ್ಲ ಪಕ್ಷಗಳೂ ಒಟ್ಟಿಗೆ ಹೆಜ್ಜೆಯಿಡಬೇಕು ಎಂದಿದ್ದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅಭಿನಂದನೆ ಸಲ್ಲಿಸಿದ್ದಾರೆ.
07:44 PM Mar 25, 2024 IST | Chaitra Kulal

ಬೆಂಗಳೂರು: ಮೇಕೆದಾಟು ಯೋಜನೆ ರಾಜ್ಯಕ್ಕೆ ಅತ್ಯಗತ್ಯವಾಗಿದ್ದು, ಈ ಬಗ್ಗೆ ರಾಜ್ಯದ ಎಲ್ಲ ಪಕ್ಷಗಳೂ ಅಚಲ ನಿರ್ಧಾರ ಪ್ರಣಾಳಿಕೆಯಲ್ಲಿ ಪ್ರಕಟಿಸಲಿ. ರಾಜ್ಯದ ಎಲ್ಲ ಪಕ್ಷಗಳೂ ಒಟ್ಟಿಗೆ ಹೆಜ್ಜೆಯಿಡಬೇಕು ಎಂದಿದ್ದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅಭಿನಂದನೆ ಸಲ್ಲಿಸಿದ್ದಾರೆ.

Advertisement

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿರುವ ಡಿಸಿಎಂ ಶಿವಕುಮಾರ್, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ನಾವು ಮಾಡಿದ “ನಮ್ಮ ನೀರು, ನಮ್ಮ ಹಕ್ಕು” ಹೋರಾಟಕ್ಕೆ ಮಾಜಿ ಪ್ರಧಾನಿ ದೇವೇಗೌಡ ಅವರು ಧ್ವನಿಗೂಡಿಸಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತರಬೇಕೆಂಬ ಸಂಕಲ್ಪದಿಂದಲೇ ನಾನು ಜಲಸಂಪನ್ಮೂಲ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಮೇಕೆದಾಟು ಯೋಜನೆಗಾಗಿ ಕಾನೂನು ಹೋರಾಟ ಮುಂದುವರೆದಿದೆ. ನಮಗೆ ಗೆಲುವು ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಈ ಸಂದರ್ಭದಲ್ಲಿ ದೇವೇಗೌಡರು ನಮ್ಮ ಹೋರಾಟಕ್ಕೆ ಧ್ವನಿಗೂಡಿಸಿರುವುದನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

Advertisement

Advertisement
Tags :
Deve GowdaDK SivakumarLatestNewsNewsKarnatakaಮೇಕೆದಾಟು
Advertisement
Next Article