ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಮೇಶ್ವರ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮಿಳುನಾಡಿನಿಂದ ಬಂದವರು ಬಾಂಬ್​ ಇಟ್ಟರು ಎಂಬ ಹೇಳಿಕೆ ಭಾರೀ ಖಂಡನೆಗೆ ಕಾರಣವಾಗಿದೆ. ಸಚಿವೆ ಶೋಭಾ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದ, ಸಿಎಂ ಎಂಕೆ ಸ್ಟಾಲಿನ್ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದರು. ಇದೀಗ ಚುನಾವಣಾ ಆಯೋಗಕ್ಕೂ ದೂರು ನೀಡಲಾಗಿದೆ.
03:24 PM Mar 20, 2024 IST | Ashitha S

ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಮೇಶ್ವರ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮಿಳುನಾಡಿನಿಂದ ಬಂದವರು ಬಾಂಬ್​ ಇಟ್ಟರು ಎಂಬ ಹೇಳಿಕೆ ಭಾರೀ ಖಂಡನೆಗೆ ಕಾರಣವಾಗಿದೆ. ಸಚಿವೆ ಶೋಭಾ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದ, ಸಿಎಂ ಎಂಕೆ ಸ್ಟಾಲಿನ್ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದರು. ಇದೀಗ ಚುನಾವಣಾ ಆಯೋಗಕ್ಕೂ ದೂರು ನೀಡಲಾಗಿದೆ.

Advertisement

ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷದಿಂದ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ರಾಮೇಶ್ವರಂ ಕೆಫೆ ಬಾಂಬ್ ಬಾಸ್ಟ್ ಹಿಂದೆ ತಮಿಳುಗರು ಇದ್ದಾರೆ ಎಂದಿದ್ದಾರೆ. ತಮಿಳುನಾಡಿನಲ್ಲಿ ಟ್ರೈನಿಂಗ್ ಪಡೆದು , ಬಾಂಬ್ ಇಡಲು ಬೆಂಗಳೂರಿಗೆ ರಾಮೇಶ್ವರಂ ಕೆಫೆಗೆ ಶಂಕಿತ ಬಂದಿದ್ದಾನೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ತಮಿಳುನಾಡು-ಕರ್ನಾಟಕದ ಜನರ ಮಧ್ಯೆ ಕೋಮು ದ್ವೇಷದ ಭಾಷಣ ಮಾಡಿದ್ದಾರೆ. ಹೀಗಾಗಿ ಚುನಾವಣಾ ಆಯೋಗವು ಅವರ ವಿರುದ್ಧ ಪ್ರಜಾಪತ್ರಿನಿಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಜೊತೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Advertisement

Advertisement
Tags :
DMKindiaLatestNewsNewsKannadaನವದೆಹಲಿಬೆಂಗಳೂರುಶೋಭಾ ಕರಂದ್ಲಾಜೆಸಿಎಂ ಎಂಕೆ ಸ್ಟಾಲಿ
Advertisement
Next Article