ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಆಸ್ತಿ ಎಷ್ಟಿದೆ ಗೊತ್ತಾ?

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಅವರು ಲೋಕಸಭೆ ಚುನಾವಣೆಯ ಪ್ರಚಾರ ಆರಂಭಿಸಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೆ ಜೊತೆಗೆ ಅವರು ಅಫಿಡವಿಟ್‌ನಲ್ಲಿ ತಮ್ಮ ಆಸ್ತಿ ವಿವರವನ್ನು ಘೋಷಣೆ ಮಾಡಿದ್ದಾರೆ.
05:55 PM Apr 03, 2024 IST | Chaitra Kulal

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಅವರು ಲೋಕಸಭೆ ಚುನಾವಣೆಯ ಪ್ರಚಾರ ಆರಂಭಿಸಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೆ ಜೊತೆಗೆ ಅವರು ಅಫಿಡವಿಟ್‌ನಲ್ಲಿ ತಮ್ಮ ಆಸ್ತಿ ವಿವರವನ್ನು ಘೋಷಣೆ ಮಾಡಿದ್ದಾರೆ.

Advertisement

ಶೋಭಾ ಕರಂದ್ಲಾಜೆಯವರು 16.02 ಕೋಟಿ ಆಸ್ತಿಯ ಒಡತಿಯಾಗಿದ್ದಾರೆ. ಚರಾಸ್ತಿ – 9 ಕೋಟಿ 23 ಲಕ್ಷ 66 ಸಾವಿರ 909 ರೂಪಾಯಿ ಮೌಲ್ಯ, ಸ್ಥಿರಾಸ್ತಿ – 6 ಕೋಟಿ 78 ಲಕ್ಷ 97 ಸಾವಿರ ರೂಪಾಯಿ ಮೌಲ್ಯ, ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳಿಂದ ಮಾಡಿದ ಸಾಲ 4.06 ಕೋಟಿ ರೂ., ಶೋಭಾ ಅವರ ಬಳಿ 68.40 ಲಕ್ಷ ಮೌಲ್ಯದ 1.kg ಚಿನ್ನದ ಬಿಸ್ಕಟ್, 650‌ ಗ್ರಾಂ ಚಿನ್ನದ ಆಭರಣಗಳು ಇವೆ.

1620 ಗ್ರಾಂ ಬೆಳ್ಳಿ ಆಭರಣ ‌ಹಾಗೂ ಬೆಳ್ಳಿ ವಸ್ತುಗಳಿವೆ. ಶೋಭಾ ಕರಂದ್ಲಾಜೆ ಅವರ ವಾರ್ಷಿಕ ಆದಾಯ 2022-23ರಲ್ಲಿ 24.90 ಲಕ್ಷ ರೂಪಾಯಿಯಾಗಿದ್ದು, ಇವರ ಬಳಿ ನಗದು ಹಣ 1 ಲಕ್ಷ 71 ಸಾವಿರ ರೂಪಾಯಿಗಳಿವೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಒಟ್ಟು ನಾಲ್ಕು ಮೊಕದ್ದಮೆಗಳು ಇತ್ಯರ್ಥಕ್ಕೆ ಬಾಕಿ ಇವೆ. ಇದರಲ್ಲಿ ಎರಡು ಕ್ರಿಮಿನಲ್ ಕೇಸ್, 1 ಮಾನನಷ್ಟ ಮೊಕದ್ದಮೆಯೂ ಇದೆ ಎಂಬ ಮಾಹಿತಿ ತಿಳಿದು ಬಂದಿದೆ.

Advertisement

Advertisement
Tags :
BJPELECTIONLatestNewsLOK SABHANewsKarnatakanomination paperPROPERTYSHOBHA KARANDLAJE
Advertisement
Next Article