For the best experience, open
https://m.newskannada.com
on your mobile browser.
Advertisement

ತೆಲಂಗಾಣದಲ್ಲಿ ಕರ್ನಾಟಕ ಶಾಸಕ ಪ್ರದೀಪ್‌ ಈಶ್ವರ್‌ ಪ್ರತಿಭಟನೆ ಮಾಡ್ತಿರೋದು ಯಾಕೆ ಗೊತ್ತಾ?

ಕರ್ನಾಟಕದಲ್ಲಿ ಕಾಂಗ್ರೆಸ್‌ ಭರವಸೆಗಳ ಮೂಲಕವೇ ಅಧಿಕಾರದ ಗದ್ದುಗೆ ಹಿಡಿದಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅದೇ ರೀತಿ ತೆಲಂಗಾಣದಲ್ಲಿಯೂ ಹಲವು ಭರವಸೆಗಳನ್ನು ನೀಡಿದೆ. ಆದರೆ ಕರ್ನಾಟಕದ ಕಾಂಗ್ರೆಸ್‌ ಗ್ಯಾರಂಟಿಗಳ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರ ಪಕ್ಷದ ಅಭ್ಯರ್ಥಿಯೊಬ್ಬರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ತೆಲಂಗಾಣದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಪ್ರತಿಭಟನೆ ನಡೆಸಿದ್ದಾರೆ.
03:01 PM Nov 22, 2023 IST | Gayathri SG
ತೆಲಂಗಾಣದಲ್ಲಿ ಕರ್ನಾಟಕ ಶಾಸಕ ಪ್ರದೀಪ್‌ ಈಶ್ವರ್‌ ಪ್ರತಿಭಟನೆ ಮಾಡ್ತಿರೋದು ಯಾಕೆ ಗೊತ್ತಾ

ಚಿಕ್ಕಬಳ್ಳಾಪುರ: ಕರ್ನಾಟಕದಲ್ಲಿ ಕಾಂಗ್ರೆಸ್‌ ಭರವಸೆಗಳ ಮೂಲಕವೇ ಅಧಿಕಾರದ ಗದ್ದುಗೆ ಹಿಡಿದಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅದೇ ರೀತಿ ತೆಲಂಗಾಣದಲ್ಲಿಯೂ ಹಲವು ಭರವಸೆಗಳನ್ನು ನೀಡಿದೆ. ಆದರೆ ಕರ್ನಾಟಕದ ಕಾಂಗ್ರೆಸ್‌ ಗ್ಯಾರಂಟಿಗಳ ಬಗ್ಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರ ಪಕ್ಷದ ಅಭ್ಯರ್ಥಿಯೊಬ್ಬರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ತೆಲಂಗಾಣದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಪ್ರತಿಭಟನೆ ನಡೆಸಿದ್ದಾರೆ.

Advertisement

ತೆಲಂಗಾಣದಲ್ಲಿ ಕಾಂಗ್ರೆಸ್‌ ಪರವಾಗಿ ಶಾಸಕ ಪ್ರದೀಪ್‌ ಈಶ್ವರ್‌ ಚುನಾವಣಾ ಪ್ರಚಾರದಲ್ಲಿದ್ದರು. ಇದರ ನಡುವೆಯೇ ತೆಲಂಗಾಣ ಸಚಿವ ಪ್ರತಾಪ್ ರೆಡ್ಡಿ ಸ್ವಗ್ರಾಮದ ವೆಲುಪುರದಲ್ಲಿ ಅಂಬೇಡ್ಕರ್‌ ಪ್ರತಿಮೆ ಎದುರು ಕಾಂಗ್ರೆಸ್‌ ಕಾರ್ಯಕರ್ತರೊಂದಿಗೆ ಪ್ರದೀಪ್‌ ಈಶ್ವರ್‌ ಪ್ರತಿಭಟನೆ ನಡೆಸುತ್ತಿದ್ದಾರೆ.

ಶಾಸಕ ಪ್ರದೀಪ್‌ ಈಶ್ವರ್‌, ಬಾಲಕೊಂಡ ಕ್ಷೇತ್ರದಲ್ಲಿ ಚುನಾವಣಾ ಉಸ್ತುವಾರಿಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುತ್ಯಾಲ ಸುನೀಲ್ ಕುಮಾರ್ ಪರ ಪ್ರಚಾರ ನಡೆಸುತ್ತಿದ್ದಾರೆ.

Advertisement

Advertisement
Tags :
Advertisement