For the best experience, open
https://m.newskannada.com
on your mobile browser.
Advertisement

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ. ತೆಲುಗು, ತಮಿಳು, ಹಿಂದಿ ಭಾಷೆಯಲ್ಲೂ ಡಬ್ ಆಗಿದೆ. ಈ ಮೂಲಕ ಪರಭಾಷೆಯಲ್ಲೂ ಯುವ ಅಬ್ಬರ ಶುರುವಾಗಿದೆ. 
08:19 AM May 18, 2024 IST | Ashika S
ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ಬೆಂಗಳೂರು: ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ. ತೆಲುಗು, ತಮಿಳು, ಹಿಂದಿ ಭಾಷೆಯಲ್ಲೂ ಡಬ್ ಆಗಿದೆ. ಈ ಮೂಲಕ ಪರಭಾಷೆಯಲ್ಲೂ ಯುವ ಅಬ್ಬರ ಶುರುವಾಗಿದೆ.

Advertisement

ಕಾಲೇಜು ಹುಡುಗನ ಪಾತ್ರದಲ್ಲಿ ಯುವರಾಜ್‌ಕುಮಾರ್ ನಟಿಸಿದ್ದಾರೆ. ಯುವರಾಜ್‌ಕುಮಾರ್‌ಗೆ ನಾಯಕಿಯಾಗಿ ಸಪ್ತಮಿ ಗೌಡ ಬಣ್ಣ ಹಚ್ಚಿದ್ದಾರೆ. ಹೊಂಬಾಳೆ ಫಿಲ್ಮ್ ಯುವ ಚಿತ್ರವನ್ನು ನಿರ್ಮಾಣ ಮಾಡಿದೆ.

ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಿದ್ದಾರೆ. ಮೊದಲ ಸಿನಿಮಾದಲ್ಲೇ ಯುವರಾಜ್‌ಕುಮಾರ್ ‘ಯುವ‌’ ಚಿತ್ರದಿಂದ ಪ್ರೇಕ್ಷಕರ ಸೆಳೆದಿದ್ದಾರೆ.

Advertisement

Advertisement
Tags :
Advertisement