For the best experience, open
https://m.newskannada.com
on your mobile browser.
Advertisement

ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರೋದೇ ಡೌಟ್; ರಿಟರ್ನ್‌ ಟಿಕೆಟ್‌ ಕ್ಯಾನ್ಸಲ್

ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ಸದ್ಯ ರಾಜ್ಯಕ್ಕೆ ವಾಪಸ್ ಆಗೋದು ಡೌಟ್ ಎನ್ನಲಾಗಿದೆ. ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಮ್ಯೂನಿಚ್‌ನಿಂದ ಬುಕ್ ಆಗಿದ್ದ ರಿಟರ್ನ್‌ ಟಿಕೆಟ್‌ ಅನ್ನು ಕ್ಯಾನ್ಸಲ್ ಮಾಡಿದ್ದಾರೆ.
01:12 PM May 12, 2024 IST | Ashitha S
ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರೋದೇ ಡೌಟ್   ರಿಟರ್ನ್‌ ಟಿಕೆಟ್‌ ಕ್ಯಾನ್ಸಲ್

ಬೆಂಗಳೂರು: ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ಸದ್ಯ ರಾಜ್ಯಕ್ಕೆ ವಾಪಸ್ ಆಗೋದು ಡೌಟ್ ಎನ್ನಲಾಗಿದೆ. ಪ್ರಜ್ವಲ್ ರೇವಣ್ಣ ಅವರು ಜರ್ಮನಿಯ ಮ್ಯೂನಿಚ್‌ನಿಂದ ಬುಕ್ ಆಗಿದ್ದ ರಿಟರ್ನ್‌ ಟಿಕೆಟ್‌ ಅನ್ನು ಕ್ಯಾನ್ಸಲ್ ಮಾಡಿದ್ದಾರೆ.

Advertisement

ಸಂಸದ ಪ್ರಜ್ವಲ್ ರೇವಣ್ಣ ಅವರು ಇದೇ ಮೇ15ರಂದು ಬೆಂಗಳೂರಿಗೆ ವಾಪಸ್ ಬರುತ್ತಾರೆ ಅನ್ನೋ ಮಾಹಿತಿ ಇತ್ತು. ಮೇ15ರ ಮಧ್ಯರಾತ್ರಿ ಪ್ರಜ್ವಲ್ ರೇವಣ್ಣ ಅವರು ವಾಪಸ್ ಬಂದ್ರೆ ಅವರನ್ನು ಅರೆಸ್ಟ್ ಮಾಡಲು ಸಿದ್ಧತೆ ಕೈಗೊಳ್ಳಲಾಗಿತ್ತು. ಆದರೀಗ ಪ್ರಜ್ವಲ್ ರೇವಣ್ಣ ಅವರು ಮೇ15ಕ್ಕೆ ವಾಪಸ್ ಆಗಲು ಬುಕ್ ಮಾಡಿದ್ದ ಟಿಕೆಟ್ ಅನ್ನೇ ಕ್ಯಾನ್ಸಲ್ ಮಾಡಿದ್ದಾರೆ.

ಜರ್ಮನಿಯ ಲುಫ್ತಾನ್ಸಾ ಏರ್​ಲೈನ್ಸ್​​ನಲ್ಲಿ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿಗೆ ಬರಲು ಟಿಕೆಟ್ ಬುಕ್ ಆಗಿತ್ತು. ಆದ್ರೀಗ ಬುಕ್ ಮಾಡಲಾಗಿದ್ದ ಟಿಕೆಟ್ ಕ್ಯಾನ್ಸಲ್ ಆಗಿದ್ದು, ಸದ್ಯಕ್ಕೆ ಪ್ರಜ್ವಲ್ ರೇವಣ್ಣ ಅವರು ರಾಜ್ಯಕ್ಕೆ ಮರಳೋದೇ ಅನುಮಾನವಾಗಿದೆ.

Advertisement

ಇನ್ನು ಪ್ರಜ್ವಲ್ ರೇವಣ್ಣ ಪತ್ತೆಯಾಗದೇ ಇದ್ದರೂ ಎಸ್​ಐಟಿ ಅಧಿಕಾರಿಗಳ ತನಿಖೆಗಿಲ್ಲ ಅಡ್ಡಿಯಾಗಿಲ್ಲ. SIT ತಂಡ ಎಲ್ಲಾ ಆಯಾಮಗಳಲ್ಲೂ ತನಿಖೆಯನ್ನು ನಡೆಸುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಅಗತ್ಯ ಸಾಕ್ಷ್ಯಗಳನ್ನು ಕಲೆ ಹಾಕುತ್ತಿದ್ದು, ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಸಂತ್ರಸ್ತೆಯರ ಹೇಳಿಕೆ, ಸಾಂದರ್ಭಿಕ ಸಾಕ್ಷ್ಯ, ಟೆಕ್ನಿಕಲ್ ಎವಿಡೆನ್ಸ್, ಸಿಡಿಆರ್ ರಿಪೋರ್ಟ್​ಗಳನ್ನ ಸಂಗ್ರಹ ಮಾಡಲಾಗಿದೆ.

Advertisement
Tags :
Advertisement