For the best experience, open
https://m.newskannada.com
on your mobile browser.
Advertisement

ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ: ಡಾ. ಕೆ ಸುಧಾಕರ್

ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸುವುದರ ಮೂಲಕ ನನ್ನ ವೇದನೆ ಕಡಿಮೆ ಮಾಡಿ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ಡಾ. ಕೆ ಸುಧಾಕರ್ ಮನವಿ ಮಾಡಿದ್ದಾರೆ.
08:20 AM Mar 12, 2024 IST | Gayathri SG
ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ  ಡಾ  ಕೆ ಸುಧಾಕರ್

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸುವುದರ ಮೂಲಕ ನನ್ನ ವೇದನೆ ಕಡಿಮೆ ಮಾಡಿ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ಡಾ. ಕೆ ಸುಧಾಕರ್ ಮನವಿ ಮಾಡಿದ್ದಾರೆ.

Advertisement

ನಿನ್ನೆ (ಮಾ. 11)ನಗರದ ಖಾಸಗಿ ಪಾರ್ಟಿ ಹಾಲ್‌ನಲ್ಲಿ ಕಾರ್ಯಕರ್ತರ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಇನ್ನು ಎರಡು ಮೂರು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಘೋಷಣೆ ಆಗುತ್ತದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇನೆ. ಈ ಸಲ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿಕೊಡಿ ಎಂಬ ಬೆಂಬಲಿಗರಿಗೆ ಮನವಿ ಮಾಡಿದರು.

ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ನಡೆದ ಶ್ರೀ ಭೋಗನಂದೀಶ್ವರ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ದ ವೇಳೆ ಕೆಲವರು ನನ್ನ ಹೆಸರನ್ನು ಹರಕೆ ಕಟ್ಟಿ ಅಭ್ಯರ್ಥಿಯಾಗುವಂತೆ ಪ್ರಾರ್ಥಿಸಿದ್ದಾರೆ. ಅವರಿಗೆ ನಾನು ಋಣಿಯಾಗಿದ್ದೇನೆ ಎಂದರು.

Advertisement

Advertisement
Tags :
Advertisement