ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಸಿ. ಎನ್. ಮಂಜುನಾಥ್ ನಿವೃತ್ತಿ

ಜಯದೇವ ಆಸ್ಪತ್ರೆ ನಿರ್ದೇಶಕರನ್ನಾಗಿ ಡಾ. ಮಂಜುನಾಥ್‍ರನ್ನು ಮುಂದುವರಿಸುವ ನಿರ್ಧಾರವನ್ನು ಸರ್ಕಾರ ಕೈ ಬಿಟ್ಟಿದೆ. ಜನವರಿ 31ಕ್ಕೆ ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಮಂಜುನಾಥ್ ಅವಧಿ ಮುಕ್ತಾಯವಾಗಲಿದೆ.
03:43 PM Jan 24, 2024 IST | Ashitha S

ಬೆಂಗಳೂರು: ಜಯದೇವ ಆಸ್ಪತ್ರೆ ನಿರ್ದೇಶಕರನ್ನಾಗಿ ಡಾ. ಸಿ. ಎನ್. ಮಂಜುನಾಥ್‍ರನ್ನು ಮುಂದುವರಿಸುವ ನಿರ್ಧಾರವನ್ನು ಸರ್ಕಾರ ಕೈ ಬಿಟ್ಟಿದೆ. ಜನವರಿ 31ಕ್ಕೆ ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಮಂಜುನಾಥ್ ಅವಧಿ ಮುಕ್ತಾಯವಾಗಲಿದೆ.

Advertisement

ಕಳೆದ ಬಾರಿ ಅವಧಿ ಮುಕ್ತಾಯ ಬಳಿಕ ಜನರ ಒತ್ತಾಯ ಕೇಳಿ ಬಂದ ಹಿನ್ನೆಲೆ 6 ತಿಂಗಳ ಕಾಲ ಹುದ್ದೆಯಲ್ಲಿ ಸರ್ಕಾರ ಮುಂದುವರಿಸಿತ್ತು. ಎನ್‍ಎಂಸಿ ಆಕ್ಟ್ ಪ್ರಕಾರ 70 ವರ್ಷದವರೆಗೂ ಸೇವೆ ಸಲ್ಲಿಸಬಹುದಾಗಿದೆ. ಡಾ. ಮಂಜುನಾಥ್ ಅವರಿಗೆ 67 ವರ್ಷವಾಗಿದ್ದು, ಇನ್ನು 3 ವರ್ಷಗಳ ಕಾಲ ಸೇವೆ ಸಲ್ಲಿಸಬಹುದಾಗಿದೆ. ಆದರೆ ಸರ್ಕಾರ ಮುಂದುವರಿಸುವ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಜನವರಿ 31ಕ್ಕೆ ಡಾ. ಮಂಜುನಾಥ್ ನಿವೃತ್ತಿ ಘೋಷಣೆ ಮಾಡಲಿದ್ದಾರೆ.

ಇತ್ತ ಜಯದೇವ ಆಸ್ಪತ್ರೆ ನಿರ್ದೇಶಕರ ಹುದ್ದೆಗೆ ಪೈಪೋಟಿ ಆರಂಭವಾಗಿದ್ದು, 15ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಈ ನಡುವೆ ಮೈಸೂರು ಮೂಲದ ಸಿಎಂ ಆಪ್ತರಿಗೆ ನಿರ್ದೇಶಕರ ಹುದ್ದೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಅನ್ನೋ ಚರ್ಚೆ ಕೂಡ ಜೋರಾಗಿದೆ.

Advertisement

Advertisement
Tags :
indiaJayadeva Hospital DirectorKARNATAKALatestNewsNewsKannadaಕರ್ನಾಟಕಜಯದೇವಡಾ.ಮಂಜುನಾಥ್‌
Advertisement
Next Article