For the best experience, open
https://m.newskannada.com
on your mobile browser.
Advertisement

ಹೊಸಕೋಟೆ ಗ್ರಾಮದಲ್ಲಿ ಜನ ಸಂಪರ್ಕ ಸಭೆ ನಡೆಸಿದ ಡಾ.ಯತೀಂದ್ರ ಸಿದ್ದರಾಮಯ್ಯ

ಹೊಸಕೋಟೆ ಗ್ರಾಮದಲ್ಲಿ ಜನ ಸಂಪರ್ಕ ಸಭೆಯನ್ನು ಆಶ್ರಯ ಸಮಿತಿಯ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು.
08:43 PM Mar 02, 2024 IST | Maithri S
ಹೊಸಕೋಟೆ ಗ್ರಾಮದಲ್ಲಿ ಜನ ಸಂಪರ್ಕ ಸಭೆ ನಡೆಸಿದ ಡಾ ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು: ಹೊಸಕೋಟೆ ಗ್ರಾಮದಲ್ಲಿ ಜನ ಸಂಪರ್ಕ ಸಭೆಯನ್ನು ಆಶ್ರಯ ಸಮಿತಿಯ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು.

Advertisement

ಬಳಿಕ ಮಾತನಾಡಿದ ಅವರು, ಹೊಸಕೋಟೆ ಗ್ರಾಮದಲ್ಲಿ ಅತಿ ಹೆಚ್ಚು ಮತಗಳನ್ನು ನೀಡಿ ನಮ್ಮ ತಂದೆ ಸಿದ್ದರಾಮಯ್ಯ ಅವರನ್ನು ಮತ್ತೆ ಎರಡನೇ ಬಾರಿಗೆ ಮುಖ್ಯಮಂತ್ರಿಗಳನ್ನಾಗಿ ಆಯ್ಕೆ ಮಾಡಿದ್ದೀರಿ. ನಿಮ್ಮ ಋಣವನ್ನು ತೀರಿಸಲು ನಮ್ಮಿಂದ ಸಾಧ್ಯವಿಲ್ಲ.ಗ್ರಾಮದ ಎಲ್ಲರಿಗೂ ನಾನು ಕೃತಜ್ಞತೆಯನ್ನು ಸಲ್ಲಿಸುತ್ತ, ಇಲ್ಲಿನ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳುತ್ತೇನೆ. ಯಾವುದೇ ಸಮಸ್ಯೆಗಳಿದ್ದರೂ ನನ್ನ ಬಳಿ ಹೇಳಿಕೊಳ್ಳಿ ನಾನು ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡುತ್ತ, ತಾಲೂಕು ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳದಲ್ಲಿಯೇ ಪರಿಹಾರವನ್ನು ಸೂಚಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸವರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದ್ರಾಣಿ ಕುಮಾರ್, ಬ್ಲಾಕ್ ಅಧ್ಯಕ್ಷರ ರಂಗಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದರು.

Advertisement

Advertisement
Tags :
Advertisement