ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬರ ಪರಿಹಾರ : ಸಿದ್ದರಾಮಯ್ಯಗೆ ಎರಡು ನಾಲಿಗೆ ಇದೆಯೋ ಹತ್ತು ನಾಲಿಗೆ ಇದೆಯೋ? ಎಂದ ಆರ್‌ ಅಶೋಕ್‌

ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ಸಮರ ನಡೆಯುತ್ತಿದೆ. ಸಿದ್ದರಾಮಯ್ಯಗೆ ಎರಡು ನಾಲಿಗೆ ಇದೆಯೋ ಹತ್ತು ನಾಲಿಗೆ ಇದೆಯೋ? ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ.
01:46 PM Apr 28, 2024 IST | Chaitra Kulal

ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಮಧ್ಯೆ ಸಮರ ನಡೆಯುತ್ತಿದೆ. ಸಿದ್ದರಾಮಯ್ಯಗೆ ಎರಡು ನಾಲಿಗೆ ಇದೆಯೋ ಹತ್ತು ನಾಲಿಗೆ ಇದೆಯೋ? ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

Advertisement

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ನಾವು 4,860 ಕೋಟಿ ರೂ. ಪರಿಹಾರ ಕೇಳಿದ್ದೇವೆ ಅಂತ ಅಂತ ಹೇಳಿದ್ದಾರೆ. ಕೇಂದ್ರ 3,454 ಕೋಟಿ ರೂ. ನೀಡಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಇಬ್ಬರೂ ಸುಳ್ಳು ರಾಮಯ್ಯ, ಸುಳ್ಳು ಕುಮಾರ್, ಬುರುಡೆ ಕುಮಾರ್ ಎಂದು ಕಿಡಿಕಾರಿದರು.

ಈ ವೇಳೆ ಯುಪಿಎ ಮತ್ತು ಎನ್‌ಡಿಎ ಅವಧಿಯಲ್ಲಿ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ದಾಖಲೆ ರಿಲೀಸ್‌ ಮಾಡಿ ವಾಗ್ದಾಳಿ ನಡೆಸಿದರು. ಕಳೆದ ಹತ್ತು ವರ್ಷಗಳ ಯುಪಿಎ ಅವಧಿಯಲ್ಲಿ ನಾವು 44,838.59 ಕೋಟಿ ರೂ. ಕೇಳಿದ್ದರೆ ಮನೆಹಾಳರು ಕೊಟ್ಟಿದ್ದು ಕೇವಲ 3,579.22 ಕೋಟಿ ರೂ. ಮಾತ್ರ.

Advertisement

ಕಳೆದ ಹತ್ತು ವರ್ಷದಲ್ಲಿ ಎನ್‌ಡಿಎ ಸರ್ಕಾರದ ಬಳಿ 25,728 ಕೋಟಿ ರೂ. ಕೇಳಿದ್ದರೆ 1,1482 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಅಂಕಿ ಅಂಶ ಬಿಡುಗಡೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

 

 

 

Advertisement
Tags :
drought reliefLatestNewsNewsKarnatakaR ASHOKSIDDARAMAIAhಬೆಂಗಳೂರು
Advertisement
Next Article