ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದುಬೈ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದುಬೈನ ಉದ್ಯಮಿ, ಸಮಾಜ ಸೇವಕ ಬಾಲಕೃಷ್ಣ ಸಾಲಿಯಾನ್ ಆಯ್ಕೆ

1985ರಲ್ಲಿ ಸ್ಥಾಪಿತವಾದ ಕರ್ನಾಟಕ ಸಂಘ ದುಬೈ, ಅನಿವಾಸಿ ಕನ್ನಡಿಗರ ಕ್ಷೇಮಾಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದು, ಕಲೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕನ್ನಡಿಗರ ಮನಗೆದ್ದಿದೆ.
03:03 PM Nov 20, 2023 IST | Ashika S

ಮಂಗಳೂರು: 1985ರಲ್ಲಿ ಸ್ಥಾಪಿತವಾದ ಕರ್ನಾಟಕ ಸಂಘ ದುಬೈ, ಅನಿವಾಸಿ ಕನ್ನಡಿಗರ ಕ್ಷೇಮಾಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದು, ಕಲೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕನ್ನಡಿಗರ ಮನಗೆದ್ದಿದೆ.

Advertisement

ದುಬೈನಲ್ಲಿ ಕನ್ನಡಿಗರನ್ನು ಒಟ್ಟುಗೂಡಿಸಿ ಪ್ರತೀ ವರ್ಷವೂ ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಿದ್ದು, ಈ ವರ್ಷದ ರಾಜ್ಯೋತ್ಸವ ಅಂಗವಾಗಿ ಪ್ರತಿಷ್ಠಿತ "ದುಬೈ ಕರ್ನಾಟಕ ರಾಜ್ಯೊತ್ಸವ -2023 ಪ್ರಶಸ್ತಿಗೆ ಬಾಲಕೃಷ್ಣ ಸಾಲಿಯಾನ್ ಆಯ್ಕೆಯಾಗಿದ್ದಾರೆ.

26ನೇ ನವೆಂಬರ್ 2023 ರಂದು ನಡೆಯಲಿರುವ 68ನೇ ಕರ್ನಾಟಕ ರಾಜ್ಯೊತ್ಸವ ಕಾರ್ಯಕ್ರಮದಲ್ಲಿ ಬಾಲಕೃಷ್ಣ ಸಾಲಿಯಾನ್ ಪುರಸ್ಕರಿಸಲಾಗುವುದು ಎಂದು ಕರ್ನಾಟಕ ಸಂಘ ದುಬೈ ಅಧ್ಯಕ್ಷ ಶಶಿಧರ್ ನಾಗರಾಜಪ್ಪ ಮತ್ತು ಕಾರ್ಯಕಾರಿ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಅವರಿಗೆ ಯು.ಎ.ಇ ಸರ್ವ ಕನ್ನಡಿಗರ ಪರವಾಗಿ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದ್ದು, ಸಾಲಿಯಾನ್ ಅವರ ನಿಸ್ವಾರ್ಥ ಸೇವೆಗೆ ತಕ್ಕ ಪ್ರಶಸ್ತಿ ದೊರೆಯುತ್ತಿದ್ದು ಈ ಪುರಸ್ಕಾರವು ಇನ್ನೂ ಅನೇಕರನ್ನು ಸಮಾಜ ಸೇವೆಯತ್ತ ಪ್ರೇರೆಪಿಸುತ್ತದೆ ಎಂದು ಸಂಘದ ಪೋಷಕರು ಮತ್ತು ಸಲಹೆಗಾರರು ಅಭಿನಂದನೆ ಸಲ್ಲಿಸಿದ್ದಾರೆ.

Advertisement
Tags :
LatetsNewsNewsKannadaಅನಿವಾಸಿ ಕನ್ನಡಿಗಕರ್ನಾಟಕಕಲೆಪ್ರಶಸ್ತಿಸಂಘ ದುಬೈಸಾಂಸ್ಕೃತಿಕ ಕಾರ್ಯಕ್ರಮ
Advertisement
Next Article