For the best experience, open
https://m.newskannada.com
on your mobile browser.
Advertisement

ಹಿರಿಯ ನಟ ದ್ವಾರಕೀಶ್ ನಿಧನದ ಹಿನ್ನೆಲೆ ನಾಳೆ ಕನ್ನಡ ಚಿತ್ರರಂಗ ಬಂದ್

6 ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಮಿಂಚಿದ ದ್ವಾರಕೀಶ್​ ಇಂದು ಕಣ್ಮರೆಯಾಗಿದ್ದಾರೆ. ಅಭಿಮಾನಿಗಳನ್ನು ನಕ್ಕು-ನಲಿಸಿದ ಪ್ರಚಂಡ ಕುಳ್ಳ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.
05:21 PM Apr 16, 2024 IST | Ashitha S
ಹಿರಿಯ ನಟ ದ್ವಾರಕೀಶ್ ನಿಧನದ ಹಿನ್ನೆಲೆ ನಾಳೆ ಕನ್ನಡ ಚಿತ್ರರಂಗ ಬಂದ್

ಬೆಂಗಳೂರು: 6 ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಮಿಂಚಿದ ದ್ವಾರಕೀಶ್​ ಇಂದು ಕಣ್ಮರೆಯಾಗಿದ್ದಾರೆ. ಅಭಿಮಾನಿಗಳನ್ನು ನಕ್ಕು-ನಲಿಸಿದ ಪ್ರಚಂಡ ಕುಳ್ಳ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.

Advertisement

ದ್ವಾರಕೀಶ್ ನಿಧನದಿಂದ ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ. ಇಡೀ ಸ್ಯಾಂಡಲ್​ವುಡ್ ಶೋಕ ಸಾಗರದಲ್ಲಿ ಮುಳುಗಿದೆ. ಹಿರಿಯ ನಟನ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಹಾಕಿದ್ದಾರೆ. ಸ್ಟಾರ್​ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ. ದ್ವಾರಕೀಶ್ ನಿಧನದ ಹಿನ್ನೆಲೆ ನಾಳೆ ಕನ್ನಡ ಚಿತ್ರರಂಗ ಬಂದ್ ಮಾಡಲು ಫಿಲ್ಮ್​ ಚೇಂಬರ್ ನಿರ್ಧರಿಸಿದೆ.

ಇಂದು ನಮ್ಮನ್ನು ಅಗಲಿದ ಹಿರಿಯ ನಟ ದ್ವಾರಕೀಶ್ ಅವರಿಗೆ ಗೌರವ ಸಲ್ಲಿಸುವ ಹಿನ್ನೆಲೆ ನಾಳೆ ಕನ್ನಡ ಚಿತ್ರರಂಗ ಬಂದ್ ಮಾಡಲು ನಿರ್ಧಾರ ಮಾಡಿರುವುದಾಗಿ ಫಿಲ್ಮ್​ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್ ಹೇಳಿದ್ದಾರೆ. ಎಲ್ಲರು ಸಹಕಾರ ನೀಡುವಂತೆ ಮನವಿ ಸಹ ಮಾಡಿಕೊಂಡಿದ್ದಾರೆ.

Advertisement

Advertisement
Tags :
Advertisement