ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನೇಪಾಳದಲ್ಲಿ ತಡರಾತ್ರಿ 4.3 ತೀವ್ರತೆಯ ಲಘು ಭೂಕಂಪ

ನೇಪಾಳದಲ್ಲಿ 4.3 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ, ಭಾನುವಾರ ರಾತ್ರಿಯೇ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರವು ಮಾಹಿತಿ ನೀಡಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ. ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ಜನರು ಭಯಭೀತರಾದರು. ಹೊಸ ವರ್ಷ ಆಚರಿಸಲು ಜನರು ಅನೇಕ ಸ್ಥಳಗಳಲ್ಲಿ ಜಮಾಯಿಸಿದ್ದರು.
10:19 AM Jan 01, 2024 IST | Ashitha S

ನೇಪಾಳ: ನೇಪಾಳದಲ್ಲಿ 4.3 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ, ಭಾನುವಾರ ರಾತ್ರಿಯೇ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರವು ಮಾಹಿತಿ ನೀಡಿದೆ. ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿ ನಷ್ಟವಾಗಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ. ಹೊಸ ವರ್ಷವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ಜನರು ಭಯಭೀತರಾದರು. ಹೊಸ ವರ್ಷ ಆಚರಿಸಲು ಜನರು ಅನೇಕ ಸ್ಥಳಗಳಲ್ಲಿ ಜಮಾಯಿಸಿದ್ದರು.

Advertisement

ಇದಕ್ಕೂ ಮುನ್ನ ನವೆಂಬರ್​ನಲ್ಲಿ ನೇಪಾಳದಲ್ಲಿ ಸಂಭವಿಸಿದ್ದ ಭೂಕಂಪ ಭಾರಿ ಹಾನಿಯನ್ನುಂಟು ಮಾಡಿತ್ತು. ನವೆಂಬರ್ 3 ರಂದು ಪಶ್ಚಿಮ ನೇಪಾಳದ ಜಜರ್ಕೋಟ್​ ಹಾಗೂ ರುಕುಮ್ ಪಶ್ಚಿಮ ಜಿಲ್ಲೆಗಳಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಇದರಿಂದ 150ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದರು. ಅನೇಕ ಮಂದಿ ಗಾಯಗೊಂಡಿದ್ದರು. ಮೂರು ದಿನಗಳ ನಂತರ ಅಂದರೆ ನವೆಂಬರ್ 6 ರಂದು ಮತ್ತೆ ಭೂಕಂಪ ಸಂಭವಿಸಿತ್ತು. ನವೆಂಬರ್ 23 ರಂದು ನೇಪಾಳದ ಕಠ್ಮಂಡುವಿನಲ್ಲಿ ಭೂಕಂಪ ಸಂಭವಿಸಿತ್ತು, ಅದರ ತೀವ್ರತೆ 4.6ರಷ್ಟಿತ್ತು.

Advertisement

 

Advertisement
Tags :
indiaKARNATAKALatestNewsNewsKannadaನವದೆಹಲಿಲಘು ಭೂಕಂಪ
Advertisement
Next Article