For the best experience, open
https://m.newskannada.com
on your mobile browser.
Advertisement

ಬೆಳಗ್ಗೆದ್ದು ಬರೀ ಹೊಟ್ಟೆಗೆ ಪಪ್ಪಾಯಿ ತಿಂದ್ರೆ ಆರೋಗ್ಯಕ್ಕೆ ಎಷ್ಟೊಂದು ಲಾಭ ಗೊತ್ತ ?

ಹಣ್ಣುಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ. ನಿರ್ಧಿಷ್ಟವಾಗಿ ಕೆಲವೊಂದು ಹಣ್ಣುಗಳನ್ನು ತಿನ್ನುವ ಅಭ್ಯಾಸ ಹಲವು ಕಾಯಿಲೆಗಳನ್ನು ದೂರವಿಡುತ್ತದೆ. ಹಾಗೆಯೇ ಬೆಳಗ್ಗೆದ್ದು ಪಪ್ಪಾಯಿ ಸೇವಿಸುವುದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ.
06:49 AM Feb 05, 2024 IST | Ashitha S
ಬೆಳಗ್ಗೆದ್ದು ಬರೀ ಹೊಟ್ಟೆಗೆ ಪಪ್ಪಾಯಿ ತಿಂದ್ರೆ ಆರೋಗ್ಯಕ್ಕೆ ಎಷ್ಟೊಂದು ಲಾಭ ಗೊತ್ತ

ಆರೋಗ್ಯ: ಹಣ್ಣುಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನೋದು ಎಲ್ಲರಿಗೂ ಗೊತ್ತಿರೋ ವಿಚಾರ. ನಿರ್ಧಿಷ್ಟವಾಗಿ ಕೆಲವೊಂದು ಹಣ್ಣುಗಳನ್ನು ತಿನ್ನುವ ಅಭ್ಯಾಸ ಹಲವು ಕಾಯಿಲೆಗಳನ್ನು ದೂರವಿಡುತ್ತದೆ. ಹಾಗೆಯೇ ಬೆಳಗ್ಗೆದ್ದು ಪಪ್ಪಾಯಿ ಸೇವಿಸುವುದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ.

Advertisement

ಿನ್ನು ನೀವೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಒಂದು ಬೌಲ್ ಪಪ್ಪಾಯಿಯನ್ನು ತಿನ್ನುವುದು ದೇಹಕ್ಕೆ ವಿವಿಧ ಜೀವಸತ್ವಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ದೇಹವನ್ನು ಮಲಬದ್ಧತೆಯ ತೊಂದರೆಗಳನ್ನು ದೂರವಿಡುತ್ತದೆ. ಪಪ್ಪಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಹೀಗಾಗಿ ಇದು ಒತ್ತಡ ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಮಲಬದ್ಧತೆಯ ಹೊರತಾಗಿ ಪಪ್ಪಾಯಿ ಅಜೀರ್ಣ, ಎದೆಯುರಿ, ಆಸಿಡ್ ರಿಫ್ಲಕ್ಸ್ ಮತ್ತು ಹೊಟ್ಟೆಯ ಹುಣ್ಣುಗಳಿಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ. ಕರುಳಿನ ಆರೋಗ್ಯಕ್ಕೆ ಒಂದು ಒಳ್ಳೆಯ ಆಹಾರ.

Advertisement

ಪಪ್ಪಾಯಿಯು ವಿಟಮಿನ್ ಎ, ವಿಟಮಿನ್ ಸಿ ಮತ್ತು ವಿಟಮಿನ್ ಇ., ಫೋಲೇಟ್, ಮೆಗ್ನೀಸಿಯಮ್, ಫೋಲೇಟ್, ಪೊಟ್ಯಾಸಿಯಮ್ ಮತ್ತು ತಾಮ್ರವನ್ನು ಹೊಂದಿದೆ. ಹೀಗಾಗಿ ಇದು ಊಟದ ಪೋಷಕಾಂಶಗಳನ್ನು ಉತ್ತಮವಾಗಿ ಹೀರಿಕೊಳ್ಳುವಂತೆ ಮಾಡುತ್ತದೆ.

ಜೀರ್ಣಕ್ರಿಯೆಯ ಚಟುವಟಿಕೆ ಕಡಿಮೆಯಾದಾಗ ಪಪ್ಪಾಯಿಯಲ್ಲಿರುವ ಪಪೈನ್ ನಂತಹ ಕಿಣ್ವಗಳು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತವೆ, ಪ್ರೋಟೀನ್ ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತವೆ ಮತ್ತು ಅಜೀರ್ಣದ ಅಪಾಯವನ್ನು ಕಡಿಮೆ ಮಾಡುತ್ತದೆ.

ಪಪ್ಪಾಯಿಯ ಫೈಬರ್ ಅಂಶವು ನೈಸರ್ಗಿಕ ನಿರ್ವಿಶೀಕರಣ ಪರಿಣಾಮವ್ನು ಹೊಂದಿದೆ. ಇದು ದೇಹದಲ್ಲಿನ ತ್ಯಾಜ್ಯ ಮತ್ತು ವಿಷವನ್ನು ಹೊರಹಾಕಲು ಸಹಾಯ ಮಾಡಿಕೊಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟದಲ್ಲಿ ಸಂಭವನೀಯ ಸ್ಪೈಕ್‌ಗಳನ್ನು ತಪ್ಪಿಸಲು ಸಹಾಯ ಮಾಡುತ್ತದೆ.

ಇನ್ನು ಬೆಳಗ್ಗೆದ್ದು ಪಪ್ಪಾಯಿ ತಿನ್ನುವುದರಿಂದ ಇದು ದಿನವಿಡೀ ಹೊಟ್ಟೆ ತುಂಬಿದ ಭಾವನೆಯನ್ನು ನೀಡುತ್ತದೆ. ವೈಟ್ ಲಾಸ್ ಮಾಡಿಕೊಳ್ಳಲು ಯತ್ನಿಸುವವರಿಗೆ ಪಪ್ಪಾಯಿ ಉತ್ತಮ ಆಹಾರವಾಗಿದೆ.

ಪರಂಗಿ ಹಣ್ಣಿನಲ್ಲಿ ವಿಟಮಿನ್ ಎ ಹೆಚ್ಚಾಗಿರುವುದರಿಂದ ಆರೋಗ್ಯಕರವಾದ ಮತ್ತು ಸೌಂದರ್ಯದಿಂದ ಕೂಡಿದ ತ್ವಚೆಯನ್ನು ಹೊಂದಲು ಇದು ಸಹಾಯಮಾಡುತ್ತದೆ. ಹಾಗಾಗಿ ಖಾಲಿ ಹೊಟ್ಟೆಯಲ್ಲಿ ಪರಂಗಿ ಹಣ್ಣನ್ನು ತಿನ್ನುವು ದರಿಂದ ಮೊಡವೆಗಳು, ಸಣ್ಣ ಸಣ್ಣ ಗುಳ್ಳೆಗಳು, ಚರ್ಮದ ವಯಸ್ಸಾಗವಿಕೆ ಪ್ರಕ್ರಿಯೆ ಹೀಗೆ ಅನೇಕ ಸಮಸ್ಯೆಗಳು ನಿವಾರಣೆಯಾಗುತ್ತವೆ.  ಆಹಾರ ಪದ್ಧತಿಯಲ್ಲಿ ಪರಂಗಿ ಹಣ್ಣನ್ನು ಸೇರಿಸಿ ಕೊಳ್ಳುವುದರಿಂದ ಚರ್ಮಕ್ಕೆ ಅಗತ್ಯವಾಗಿ ಬೇಕಾದ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಗುತ್ತವೆ ಮತ್ತು ಚರ್ಮ ಒಣಗುವಿಕೆ ಪ್ರಕ್ರಿಯೆ ದೂರವಾಗುತ್ತದೆ.

Advertisement
Tags :
Advertisement