ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹರಿಯಾಣ  ಮತ್ತು ಪಂಜಾಬ್‍ನಲ್ಲಿ ಇಡಿ ದಾಳಿ

ಅಕ್ರಮ ಗಣಿಗಾರಿಕೆ ಆರೋಪದ ಪ್ರಕರಣದಲ್ಲಿ ಭಾರತೀಯ ರಾಷ್ಟ್ರೀಯ ಲೋಕದಳದ ಮಾಜಿ ಶಾಸಕ ದಿಲ್‍ಬಾಗ್ ಸಿಂಗ್, ಕಾಂಗ್ರೆಸ್ ಶಾಸಕ  ಸುರೇಂದರ್ ಪನ್ವಾರ್  ಮತ್ತು ಅವರ ಆಪ್ತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ತನಿಖಾ ಸಂಸ್ಥೆ ಶೋಧ ನಡೆಸುತ್ತಿದೆ.
02:39 PM Jan 05, 2024 IST | Ashika S

ನವದೆಹಲಿ: ಹರಿಯಾಣ  ಮತ್ತು ಪಂಜಾಬ್‍ನಲ್ಲಿ ಅಕ್ರಮ ಗಣಿಗಾರಿಕೆ ಆರೋಪದ ಪ್ರಕರಣದಲ್ಲಿ ಭಾರತೀಯ ರಾಷ್ಟ್ರೀಯ ಲೋಕದಳದ ಮಾಜಿ ಶಾಸಕ ದಿಲ್‍ಬಾಗ್ ಸಿಂಗ್, ಕಾಂಗ್ರೆಸ್ ಶಾಸಕ  ಸುರೇಂದರ್ ಪನ್ವಾರ್  ಮತ್ತು ಅವರ ಆಪ್ತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ತನಿಖಾ ಸಂಸ್ಥೆ( ಇಡಿ ದಾಳಿ)  ಶೋಧ ನಡೆಸುತ್ತಿದೆ.

Advertisement

ಇಡಿ  ಅಧಿಕಾರಿಗಳು ನಡೆಸಿದ ದಾಳಿಯ ವೇಳೆ 5 ಕೋಟಿ ರೂ. ಹಣ, ವಿದೇಶಿ ನಿರ್ಮಿತ ಅಕ್ರಮ ಶಸ್ತ್ರಾಸ್ತ್ರ, 300 ಕಾಟ್ರಿಡ್ಜ್‌ಗಳನ್ನು, 100 ಮದ್ಯದ ಬಾಟಲಿಗಳು ಸೇರಿದಂತೆ 4 ರಿಂದ 5 ಕೆಜಿ ತೂಕದ ಮೂರು ಚಿನ್ನದ ಬಿಸ್ಕೆಟ್‍ಗಳು ಪತ್ತೆಯಾಗಿವೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‍ಜಿಟಿ) ಗಣಿಗಾರಿಕೆಯನ್ನು ನಿಷೇಧಿಸಿದ ನಂತರ ಯಮುನಾನಗರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬಂಡೆಗಳು, ಜಲ್ಲಿ ಮತ್ತು ಮರಳು ಅಕ್ರಮ ಗಣಿಗಾರಿಕೆಯ ಕುರಿತು ತನಿಖೆ ನಡೆಸಲು ಹರಿಯಾಣ ಪೊಲೀಸರು ಅನೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು.

Advertisement

ತನಿಖಾ ಸಂಸ್ಥೆಯು ಮನಿ ಲಾಂಡರಿಂಗ್ ಪ್ರಕರಣವನ್ನು ದಾಖಲಿಸಿಕೊಂಡಿತ್ತು.  ಗಣಿಗಾರಿಕೆ ಸಂಬಂಧಿತ ತೆರಿಗೆ ವಂಚನೆ ತಡೆಯಲು ಸರ್ಕಾರ ಆನ್‍ಲೈನ್ ಪೋರ್ಟಲ್‍ನ್ನು ಜಾರಿಗೆ ತಂದಿದೆ. ಕೆಲವು ಶಾಸಕರು ಈ ನಕಲಿ ಪೋರ್ಟಲ್ ಸೃಷ್ಟಿಸಿ ವಂಚಿಸುತ್ತಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

Advertisement
Tags :
LatestNewsNewsKannadaಅಕ್ರಮಗಣಿಗಾರಿಕೆತನಿಖಾ ಸಂಸ್ಥೆಭಾರತೀಯಮಾಜಿ ಶಾಸಕರಾಷ್ಟ್ರೀಯ ಲೋಕದಳದ
Advertisement
Next Article