ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

2024ರ ಚುನಾವಣೆ ದೇಶ ಭಕ್ತ, ದೇಶ ವಿರೋಧಿಗಳ ನಡುವಿನ ನಿರ್ಣಾಯಕ ಚುನಾವಣೆ – ಕ್ಯಾಪ್ಟನ್ ಬ್ರಿಜೇಶ್ ಚೌಟ

ಸರಕಾರದ ಯೋಜನೆಯನ್ನು ನೇರವಾಗಿ ಸಾಮಾನ್ಯ ಜನರಿಗೆ ತಲುಪಿಸಿದ ಏಕೈಕ ಸರಕಾರ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ. ಹಾಗಾಗಿ 2024ರ ಚುನಾವಣೆ ದೇಶ ಭಕ್ತ, ದೇಶ ವಿರೋಧಿಗಳ ನಡುವಿನ ನಿರ್ಣಾಯಕ ಚುನಾವಣೆ ಎಂದು ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಹೇಳಿದರು.
04:56 PM Mar 22, 2024 IST | Chaitra Kulal

ಪುತ್ತೂರು: ಸರಕಾರದ ಯೋಜನೆಯನ್ನು ನೇರವಾಗಿ ಸಾಮಾನ್ಯ ಜನರಿಗೆ ತಲುಪಿಸಿದ ಏಕೈಕ ಸರಕಾರ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ. ಹಾಗಾಗಿ 2024ರ ಚುನಾವಣೆ ದೇಶ ಭಕ್ತ, ದೇಶ ವಿರೋಧಿಗಳ ನಡುವಿನ ನಿರ್ಣಾಯಕ ಚುನಾವಣೆ ಎಂದು ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಹೇಳಿದರು.

Advertisement

ಪುತ್ತೂರು ಜೈನ ಭವನದಲ್ಲಿ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ಬಿಜೆಪಿ ಪಕ್ಷ ವಿಚಾರದ ಆದಾರದಲ್ಲಿ ಕೆಲಸ ಮಾಡುವುದು. ಕಾರ್ಯಕರ್ತರ ನಂಬಿಕೆ, ಜನರ ಮೇಲಿನ ವಿಶ್ವಾಸ, ವಿಚಾರದ ಬದ್ದತೆಗೆ ಅನುಗುಣವಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಒಪ್ಪಿಕೊಂಡಂತೆ. ಈ ಭಾರಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದೆ ಎಂಬ ಸ್ಪಷ್ಟ ನಿರ್ದಶನವನ್ನು ಮನೆ ಮನೆಗೆ ತಿಳಿಸಬೇಕಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸಂಘಟನಾತ್ಮಕ ಜಿಲ್ಲೆ. ಇಲ್ಲಿ ಕಾರ್ಯಕರ್ತರ ಪ್ರೀತಿ ವಿಶ್ವಾಸ ಮುಖ್ಯ. ನಮ್ಮ ಪಾರ್ಟಿಯನ್ನು ಎಲ್ಲರು ಒಪ್ಪಿಕೊಂಡಿದ್ದಾರೆ. ಇದು ಕಾರ್ಯಕರ್ತರ ಪ್ರೀತಿ ವಿಶ್ವಾಸದಿಂದ ಸಾಧ್ಯ ಆಗಿದೆ. ಅತ್ಯಂತ ಶ್ರೀಮಂತಿಕೆಯ ನಾಡು ನಮ್ಮ ತುಳುನಾಡು. ಹೆಮ್ಮೆಯ ಪ್ರದೇಶದಲ್ಲಿ ನನಗೆ ಪ್ರತಿನಿಧಿಸಲು ಸಿಕ್ಕಿರುವುದು ನನಗೆ ಪುಣ್ಯದ ಕೆಲಸ. ನನ್ನ ಬದ್ಧತೆ ಸದಾ ಹಿಂದುತ್ವಕ್ಕೆ ಇರುತ್ತದೆ. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಒಂದಷ್ಟು ಚ್ಯುತಿ ಭಾರದಂತೆ ನಾನು ಕೆಲಸ ಮಾಡಲಿದ್ದೇನೆ. ಈ ನಿಟ್ಟಿನಲ್ಲಿ 2024ರ ನಿರ್ಣಾಯಕ ಚುನಾವಣೆಯಾಗಿದ್ದು ಹಿಂದು ಸಮಾಜದ ಜಾಗೃತಿ, ಹಿಂದು ಜೀವನಪದ್ದತಿಗೆ, ಸಂಸ್ಕೃತಿಗೆ ಅಗತ್ಯವಾಗಿ ಯುಗ ಪುರುಷ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿದೆ ಎಂದರು.

ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ಸರ್ವೇ ಜನಾಃ ಸುಖಿನೋ ಭವಂತು ಎಂಬಂತೆ. ಮಹಾತ್ಮಗಾಂಧಿಯ ಗ್ರಾಮ ಸ್ವರಾಜ್ಯ ಕಲ್ಪಣೆಯನ್ನು ಇಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮ ಭ್ರಷ್ಟಾಚಾರ ಮುಕ್ತ ಭಾರತವಾಗಿದೆ. ಈ ನಿಟ್ಟಿನಲ್ಲಿ ಯುಪಿಎ ಭ್ರಷ್ಟಾಚಾರ ಸರಕಾರ ಆಗಿತ್ತು. ನರೇಂದ್ರ ಮೋದಿ ಹಾಕಿದ ಕಾರ್ಯಕ್ರಮ ಜನಮಾನಸದಲ್ಲಿ ಮೂಡಿದ ಕಾರ್ಯಕ್ರಮವಾಗಿದೆ. ದೇಶದ ಜನ ನರೇಂದ್ರ ಮೋದಿಯವರನ್ನು ಹೇಗೆ ಆಯ್ಕೆ ಮಾಡಿದ್ದಾರೋ ನಮ್ಮ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನಮ್ಮೆಲ್ಲರ ಆಯ್ಕೆ. ಬ್ರಿಜೇಶ್ ಚೌಟ ಅವರಿಗೆ ಆಶೀರ್ವಾದ ಮಾಡುವ ಮೂಲಕ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವಂತೆ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.

Advertisement

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಮಾತನಾಡಿ ನಮ್ಮ ಅಭ್ಯರ್ಥಿ ಬ್ರಿಜೇಶ್ ಚೌಟ ಅವರನ್ನು ದೊಡ್ಡ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ನಾವೆಲ್ಲ ಸಂಕಲ್ಪ ಮಾಡಿದ್ದೇವೆ. ಜಗತ್ತು ಈ ದೇಶಕ್ಕೆ ಗೌರವ ಕೊಡುವ ಸನ್ನಿವೇಶದಲ್ಲಿ, ಈಗಿನ ಕರ್ನಾಟಕ ಸರಕಾರ ಮುಸಲ್ಮಾನರ ತುಷ್ಟಿಕರಣ, ಹಿಂದು ವಿರೋಧಿ ನೀತಿಯ ವಿರುದ್ದ ನಾವು ತೊಡೆ ತಟ್ಟಿ ನಿಲ್ಲುವ ಸಂದರ್ಭದಲ್ಲಿ ನಾವೆಲ್ಲ ಎಚ್ಚೆತ್ತು ಕೊಂಡು ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು ಅದಕ್ಕಾಗಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಗೆಲ್ಲಿಸಬೇಕೆಂದು ಅವರು ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 12 ವರ್ಷಗಳಿಂದ ನಳಿನ್ ಕುಮಾರ್ ಕಟೀಲ್ ಉತ್ತಮ ಅಭಿವೃದ್ದಿ ಕೆಲಸ ಮಾಡಿದ್ದಾರೆ. ಅವರ ಅಭಿವೃದ್ಧಿಗಳನ್ನು ಮುಂದಿಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4 ಲಕ್ಷ ಮತಗಳ ಅಂತರದಲ್ಲಿ ಬ್ರಿಜೇಶ್ ಚೌಟ ಅವರನ್ನು ಗೆಲ್ಲಿಸಬೇಕೆಂದರು. ಪುತ್ತೂರು ಕ್ಷೇತ್ರದಲ್ಲಿ ಒಂದರಿಂದ ಒಂದುಕಾಲು ಲಕ್ಷ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಅವರನ್ನು ಗೆಲ್ಲಿಸಬೇಕೆಂದರು.

ಬಿಜೆಪಿ ವಿಭಾಗ ಸಹ ಸಂಚಾಲಕ ಗೋಪಾಲಕೃಷ್ಣ ಹೇರಳೆ,ಮಾಜಿ ಶಾಸಕಿ ಮಲ್ಲಿಕಾಪ್ರಸಾದ್, ಪುತ್ತೂರು ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ, ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಸುಲೋಚನಾ ಭಟ್, ಚುನಾವಣಾ ನಿರ್ವಾಹಣಾ ಸಮಿತಿ ಸಹ ಸಂಚಾಲಕ ಉಮೇಶ್ ಕೋಡಿಬೈಲು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪುತ್ತೂರು ಮಂಡಲದ ಉಸ್ತುವಾರಿ ಸುನಿಲ್ ಆಳ್ವ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆರ್ ಸಿ ನಾರಾಯಣ, ಜಿಲ್ಲಾ ಬಿಜೆಪಿ ವಿದ್ಯಾಗೌರಿ, ಜಿಲ್ಲಾ ಎಸ್ಟಿ ಮೋರ್ಚಾ ಕಾರ್ಯದರ್ಶಿ ಹರೀಶ್ ಬಿಜತ್ರೆ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ,ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ ಜಗನ್ನಿವಾಸ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Tags :
Arun Kumar PuttilaCaptain Brijesh ChautaELECTIONGovtLatestNewsLOK SABHANewsKarnatakaPUTTURSanjeeva Mathandur
Advertisement
Next Article