ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಚುನಾವಣಾ ಹಿನ್ನಲೆ ಬ್ಯಾಂಕ್ ಖಾತೆ ಸ್ಥಗಿತ : ಸಿಎಂ ಆಕ್ರೋಶ!

ಚುನಾವಣಾ ವೇಳೆ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷವು ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರಕಾರದ  ಬಹುಮುಖ್ಯ ಉದ್ದೇಶವಾಗಿದೆ. ಚುನಾವಣಾ ಆಯೋಗವು ಕೂಡಲೇ ಈ ಕಾನೂನು ಬಾಹಿರ ಕ್ರಮವನ್ನು ಹಿಂಪಡೆಯುವಂತೆ ನಿರ್ದೇಶನ ನೀಡಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
11:35 AM Mar 22, 2024 IST | Chaitra Kulal

ಬೆಂಗಳೂರು: ಚುನಾವಣಾ ವೇಳೆ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ ಕಾಂಗ್ರೆಸ್ ಪಕ್ಷವು ಹಣದ ಕೊರತೆಯಿಂದ ಗೋಳಾಡುವಂತೆ ಮಾಡಬೇಕೆನ್ನುವುದೇ ಬಿಜೆಪಿ ಸರಕಾರದ  ಬಹುಮುಖ್ಯ ಉದ್ದೇಶವಾಗಿದೆ. ಚುನಾವಣಾ ಆಯೋಗವು ಕೂಡಲೇ ಈ ಕಾನೂನು ಬಾಹಿರ ಕ್ರಮವನ್ನು ಹಿಂಪಡೆಯುವಂತೆ ನಿರ್ದೇಶನ ನೀಡಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿರುವ ‘ದುಷ್ಟ ಶಕ್ತಿ’, ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಲಯವನ್ನು ಕೂಡಾ ಬುಡಮೇಲು ಮಾಡಲು ಹೊರಟಿದೆ. ಬ್ಯಾಂಕ್ ಖಾತೆ ಸ್ಥಗಿತಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ. ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆ. ಜನರೇ ಚುನಾವಣೆ ಮೂಲಕ ಇವರಿಗೆ ಪಾಠ ಕಲಿಸಬೇಕು ಎಂದರು.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಚುನಾವಣಾ ಬಾಂಡ್ ಮೂಲಕ ಉದ್ಯಮಿಗಳಿಂದ ಸಾವಿರಾರು ಕೋಟಿ ರು.ಗಳನ್ನು ಸುಲಿಗೆ ಮಾಡಿ ತಮ್ಮ ಖಾತೆಗೆ ತುಂಬಿಸಿಕೊಂಡಿರುವ ಬಿಜೆಪಿ ಬಗ್ಗೆ ಚುನಾವಣಾ ಆಯೋಗ ಮೌನವಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಆಯೋಗ ತಕ್ಷಣ ಇದನ್ನು ಗಮನಿಸಿ ನಮ್ಮ ಪಕ್ಷಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದಿದ್ದಾರೆ. ಇನ್ನು ನಮ್ಮ ಪಕ್ಷದ ಖಾತೆಯಲ್ಲಿರುವುದು ಪಕ್ಷದ ಅಭಿಮಾನಿಗಳಾದ ಸಾಮಾನ್ಯ ಜನರಿಂದ ಸಂಗ್ರಹವಾಗಿರುವ ಹಣ, ಅದರಲ್ಲಿರುವುದು ದೊಡ್ಡ ಉದ್ಯಮಪತಿಗಳದ್ದಲ್ಲ. ಹೀಗಿದ್ದರೂ ಯಾಕೆ ಇಂತಹ ಕ್ರಮ? ಎಂದು ಪ್ರಶ್ನಿಸಿದ್ದಾರೆ.

Advertisement

ಮೋದಿ ಮತ್ತು ಬಿಜೆಪಿಯಲ್ಲಿ ಸೋಲಿನ ಭಯ ಹುಟ್ಟಿಕೊಂಡಿದೆ ಈ ಕಾರಣದಿಂದಾಗಿ ಖಾತೆ ಸ್ಥಗಿತಗೊಳಿಸಿದ್ದಾರೆ.  ಸಾರ್ವಜನಿಕವಾಗಿ ಎದೆಯುಬ್ಬಿಸಿ ಏನೇ ಕೊಚ್ಚಿಕೊಂಡರೂ ಆಂತರ್ಯದಲ್ಲಿರುವ ಆತ್ಮಸಾಕ್ಷಿ ಸತ್ಯವನ್ನೇ ಹೇಳುತ್ತದೆ. 400 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಬಾಯಲ್ಲಿ ಹೇಳಿಕೊಂಡರೂ ವಾಸ್ತವದ ಸ್ಥಿತಿ ಏನೆನ್ನುವುದು ನರೇಂದ್ರ ಮೋದಿಗೆ ಗೊತ್ತಿದೆ. ಈ ಭಯದ ಕಾರಣದಿಂದಲೇ ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸುವ ಸೇಡಿನ ಕ್ರಮಕ್ಕೆ ಮುಂದಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

 

 

 

 

Advertisement
Tags :
BANKBJPCongressELECTIONGovtLatestNewsnewsKarnatakಬೆಂಗಳೂರು
Advertisement
Next Article