ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮತದಾನ ಜಾಗೃತಿ: ಮಾಣಿಯ 4ನೇ ತರಗತಿ ವಿದ್ಯಾರ್ಥಿನಿಗೆ ಚುನಾವಣಾ ಆಯೋಗದಿಂದ ಮೆಚ್ಚುಗೆ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಜಾಗೃತಿ ಮೂಡಿಸಿ ಗಮನ ಸೆಳೆದಿರುವ ದಕ್ಷಿಣ ಕನ್ನಡದ ಮಾಣಿಯ 4ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿಗೆ ಕೇಂದ್ರ ಚುನಾವಣಾ ಆಯೋಗವು ಮೆಚ್ಚುಗೆ ವ್ಯಕ್ತಪಡಿಸಿದೆ.
11:51 AM Feb 27, 2024 IST | Ashitha S

ಮಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಜಾಗೃತಿ ಮೂಡಿಸಿ ಗಮನ ಸೆಳೆದಿರುವ ದಕ್ಷಿಣ ಕನ್ನಡದ ಮಾಣಿಯ 4ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿಗೆ ಕೇಂದ್ರ ಚುನಾವಣಾ ಆಯೋಗವು ಮೆಚ್ಚುಗೆ ವ್ಯಕ್ತಪಡಿಸಿದೆ.

Advertisement

ಹೌದು. . ಈಕೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶೇ.100 ಮತದಾನದ ಅರಿವು ಮೂಡಿಸುವ ಆಕೆಯ ಅತ್ಯುತ್ತಮ ಉದ್ದೇಶಕ್ಕೆ ಮೆಚ್ಚುಗೆ ಸೂಚಿಸಿದೆ. ಬಂಟ್ವಾಳ ತಾ| ಬಾಳಿಲ ಗ್ರಾಮದ ಕಶೆಕೋಡಿ ನಿವಾಸಿಯಾಗಿರುವ ಸನ್ನಿಧಿ ಮಾಣಿ ಪೆರಾಜೆ ಬಾಲವಿಕಾಸ ಇಂಗ್ಲಿಷ್ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ.

ಈಕೆ ಕಳೆದ ಚುನಾವಣೆಯ ಸಂದರ್ಭದಲ್ಲಿ ತಾನು ಮಾಡಿದ ಮತದಾನ ಜಾಗೃತಿಯ ದಾಖಲೆಗಳನ್ನು ಇಮೇಲ್‌ ಮೂಲಕ ಚುನಾವಣಾ ಆಯೋಗಕ್ಕೆ ಕಳುಹಿಸಿ ಅದಕ್ಕಾಗಿ ಸಹಕಾರ ಕೋರಿದ್ದರು. ತನ್ನ ಸಹಪಾಠಿಗಳೊಂದಿಗೆ ಮನೆ, ಅಂಗಡಿಗಳು, ಸಾರ್ವಜನಿಕ ಪ್ರದೇಶಗಳಲ್ಲಿ ಮತದಾನ ಜಾಗೃತಿ ಕಾರ್ಯದಲ್ಲಿ ತೊಡಗಿದ್ದರು. ಮತದಾನ ಮಾಡುವ ಜತೆಗೆ ಪಕ್ಷಾತೀತವಾಗಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಪ್ರೇರಣೆ ನೀಡಿದ್ದಳು.

Advertisement

ದ.ಕ ದ ಡಿಸಿ ಕೂಡ ಈಕೆಯ ಕಾರ್ಯವನ್ನು ಗುರುತಿಸಿ ಪ್ರಶಂಸಿಸಿದ್ದರು. ಸನ್ನಿಧಿಯ ಪತ್ರಕ್ಕೆ ಇದೀಗ ಚುನಾವಣಾ ಆಯೋಗದಿಂದ ಪ್ರತಿಕ್ರಿಯೆ ಬಂದಿದೆ. "ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವುದಕ್ಕೆ ಧನ್ಯವಾದಗಳು. ಆಯೋಗವು ನಿಮ್ಮ ಮೌಲಿಕ ಅಭಿಪ್ರಾಯಗಳನ್ನು ಗುರುತಿಸಿದೆ. ಉತ್ತಮ ಚುನಾವಣಾ ಪ್ರಕ್ರಿಯೆ ನಡೆಸಲು ಪೂರಕವಾಗಿ ನಿಮ್ಮ ಅಭಿಪ್ರಾಯ, ಕಾರ್ಯಗಳನ್ನು ಪ್ರಶಂಸಿಸುತ್ತೇವೆ" ಎಂದು ಪ್ರತಿಕ್ರಿಯೆಯಲ್ಲಿ ತಿಳಿಸಿದೆ.

 

Advertisement
Tags :
indiaKARNATAKALatestNewsNewsKannadaಚುನಾವಣಾ ಆಯೋಗಮಂಗಳೂರುಮತದಾನಮಾಣಿವಿದ್ಯಾರ್ಥಿನಿ
Advertisement
Next Article