For the best experience, open
https://m.newskannada.com
on your mobile browser.
Advertisement

6 ರಾಜ್ಯದ ಗೃಹ ಕಾರ್ಯದರ್ಶಿಗಳನ್ನು ಹುದ್ದೆಯಿಂದ ಕೆಳಗಿಳಿಸಿ ಚುನಾವಣಾ ಆಯೋಗ ಆದೇಶ

ಲೋಕಸಭಾ ಚುನಾವಣಾ ದಿನಾಂಕ ಘೋಷಿಸಿರುವ ಕೇಂದ್ರ ಚುನಾವಣಾ ಆಯೋಗ ಇದೀಗ ಪ್ರತಿ ರಾಜ್ಯದ ಮೇಲೂ ಹದ್ದಿನ ಕಣ್ಮಿಟ್ಟಿದೆ. ನೀತಿ ಸಂಹಿತೆ ಪಾಲನೆಯಾಗದಿದ್ದರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಇತ್ತ ನ್ಯಾಯಸಮ್ಮತ ಚುನಾವಣೆ ನಡೆಸಲು ಇದೀಗ ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದೆ. 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಹುದ್ದೆಯಿಂದ ಕೆಳಗಿಳಿಯುವಂತೆ ಸೂಚಿಸಿದೆ.
04:59 PM Mar 18, 2024 IST | Ashitha S
6 ರಾಜ್ಯದ ಗೃಹ ಕಾರ್ಯದರ್ಶಿಗಳನ್ನು ಹುದ್ದೆಯಿಂದ ಕೆಳಗಿಳಿಸಿ ಚುನಾವಣಾ ಆಯೋಗ ಆದೇಶ

ನವದೆಹಲಿ: ಲೋಕಸಭಾ ಚುನಾವಣಾ ದಿನಾಂಕ ಘೋಷಿಸಿರುವ ಕೇಂದ್ರ ಚುನಾವಣಾ ಆಯೋಗ ಇದೀಗ ಪ್ರತಿ ರಾಜ್ಯದ ಮೇಲೂ ಹದ್ದಿನ ಕಣ್ಮಿಟ್ಟಿದೆ. ನೀತಿ ಸಂಹಿತೆ ಪಾಲನೆಯಾಗದಿದ್ದರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಇತ್ತ ನ್ಯಾಯಸಮ್ಮತ ಚುನಾವಣೆ ನಡೆಸಲು ಇದೀಗ ಮತ್ತೊಂದು ಮಹತ್ವದ ಕ್ರಮ ಕೈಗೊಂಡಿದೆ. 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಹುದ್ದೆಯಿಂದ ಕೆಳಗಿಳಿಯುವಂತೆ ಸೂಚಿಸಿದೆ.

Advertisement

ಇದೇ ವೇಳೆ ಪಶ್ಚಿಮ ಬಂಗಾಳ ಪೊಲೀಸ್ ಮಹಾ ನಿರ್ದೇಶಕರನ್ನು ವರ್ಗಾವಣೆಗೊಳಿಸಲು ಚುನಾವಣಾ ಆಯೋಗ ಆದೇಶ ನೀಡಿದೆ. ಇದರ ಜೊತೆಗೆ ಕೆಲ ಹಿರಿಯ ಅಧಿಕಾರಿಗಳನ್ನು ಹುದ್ದೆಯಿಂದ ಕೆಳಗಿಳಿಯುವಂತೆ ಆದೇಶಿಸಿದೆ.

ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಹಾಗೂ ಉತ್ತರಖಂಡ ಗೃಹ ಕಾರ್ಯದರ್ಶಿಗಳನ್ನು ಹುದ್ದೆಯಿಂದ ಕೆಳೆಗಿಳಿಯಲು ಸೂಚಿಸಿದೆ. ಮಿಜೋರಾಮ್ ಹಾಗೂ ಹಿಮಾಚಲ ಪ್ರದೇಶದ ಹೆಚ್ಚುವರಿ ಕಾರ್ಯದರ್ಶಿಗಳನ್ನೂ ಹುದ್ದೆಯಿಂದ ಕೆಳಗಿಳಿಯಲು ಸೂಚಿಸಿದೆ. ಬೃಹತ್ ಮುಂಬೈ ಮಹಾನಗರ ಪಾಲಿಕೆ ಕಮಿಷನರ್ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ಆಯೋಗ ಸೂಚಿಸಿದೆ.

Advertisement

Advertisement
Tags :
Advertisement