For the best experience, open
https://m.newskannada.com
on your mobile browser.
Advertisement

ಪುತ್ತೂರು ಸರಕಾರಿ ಆಸ್ಪತ್ರೆಯ ಐಸಿಯುವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್

ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಐ ಸಿ ಯು ವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22 ರ ತಡ ರಾತ್ರಿ ನಡೆದಿದ್ದು ಅದೃಷ್ಟವಶಾತ್ ಹೆಚ್ಚಿನ ಅನಾಹುತವೊಂದು ತಪ್ಪಿದೆ.
09:12 AM Dec 23, 2023 IST | Ramya Bolantoor
ಪುತ್ತೂರು ಸರಕಾರಿ ಆಸ್ಪತ್ರೆಯ ಐಸಿಯುವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್

ಪುತ್ತೂರು: ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಐ ಸಿ ಯು ವಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22 ರ ತಡ ರಾತ್ರಿ ನಡೆದಿದ್ದು ಅದೃಷ್ಟವಶಾತ್ ಹೆಚ್ಚಿನ ಅನಾಹುತವೊಂದು ತಪ್ಪಿದೆ.

Advertisement

ಆಸ್ಪತ್ರೆಯ ಐ ಸಿ ಯು ವಿಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ದಟ್ಟ ಹೊಗೆ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಭದ್ರತಾ ಸಿಬ್ಬಂದಿಗಳು ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರಿಂದ ರೋಗಿಗಳು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ
ಆಗಮಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡಿದ್ದಾರೆ. ಬೆಂಕಿಯ ಶಮನದ ಬಳಿಕ ದತ್ತ ಮಾಲಾಧಾರಿಗಳು ಅಸ್ಪತ್ರೆಯನ್ನು ಶುಚಿಗೊಳಿಸಲು ಸಹಕರಿಸಿದ್ದಾರೆ.

ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಆಶಾ ಪುತ್ತೂರಾಯ ಈ ಸಂದರ್ಭ ಉಪಸ್ಥಿತರಿದ್ದರು. ವಿಷಯ ತಿಳಿದು ರಾತ್ರಿ 1 ಗಂಟೆ ವೇಳೆಗೆ ಶಾಸಕ ಅಶೋಕ್ ಕುಮಾರ್ ರೈ ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

Advertisement

Advertisement
Tags :
Advertisement