For the best experience, open
https://m.newskannada.com
on your mobile browser.
Advertisement

ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ: ಚಕ್ರವರ್ತಿ ಸೂಲಿಬೆಲೆ

ಒಂದು ವೇಳೆ ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ಸ್ಪರ್ಧಿಸಲು ವಿರೋಧ ಇಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ
09:32 AM Mar 15, 2024 IST | Gayathri SG
ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ವಿರೋಧ ಇಲ್ಲ  ಚಕ್ರವರ್ತಿ ಸೂಲಿಬೆಲೆ

ಮಂಗಳೂರು: ಒಂದು ವೇಳೆ ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ಸ್ಪರ್ಧಿಸಲು ವಿರೋಧ ಇಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

Advertisement

ಅವರು ಉತ್ತರ ಕನ್ನಡ ಬಿಜೆಪಿ ಟಿಕೆಟ್ ಬಗ್ಗೆ ಪುತ್ತೂರಿನಲ್ಲಿ ಮಾತನಾಡಿ, ಚುನಾವಣೆ ಟಿಕೆಟ್ ಕೇಳಿಕೊಂಡು ಹೋಗುವುದಿಲ್ಲ. ಒಂದು ವೇಳೆ ಅಂಥ ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ ಎಂದು ಹೇಳಿದ್ದಾರೆ.

ರಾಜಕೀಯ ಆಸಕ್ತಿಯ ಪ್ರಶ್ನೆ ಬೇರೆ. ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಸೀಟ್ ಕೇಳಿಕೊಂಡು ಹೋಗುವುದಿಲ್ಲ. ಅಂಥ ಅವಕಾಶ ಬಂದರೆ ಯಾವುದೇ ವಿರೋಧ ಇಲ್ಲ. ಹತ್ತು ವರ್ಷಗಳಿಂದ ಕಾಪಾಡಿಕೊಂಡು ಬಂದಿರೋದನ್ನ ಸ್ವಲ್ಪ ಸಡಿಲ ಮಾಡ್ತೀನಿ. ಏನಾದ್ರು ಭಗವಂತನ ಇಚ್ಛೆ ಇದ್ದರೆ ಅದು ಆಗೇ ಆಗುತ್ತೆ. ಆದರೆ ಇದುವರೆಗೆ ನನ್ನನ್ನ ಯಾರೂ ಸಂಪರ್ಕಿಸಿಲ್ಲ, ನಾನೂ ಸಂಪರ್ಕ ಮಾಡಿಲ್ಲ ಎಂದರು.

Advertisement

Advertisement
Tags :
Advertisement