ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ರಾಜಧಾನಿಯ ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ ಪ್ರತಿಷ್ಠಿತ ಪಿಇಎಸ್ ಯೂನಿವರ್ಸಿಟಿಯಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
01:40 PM May 15, 2024 IST | Chaitra Kulal

ಬೆಂಗಳೂರು: ರಾಜಧಾನಿಯ ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ ಪ್ರತಿಷ್ಠಿತ ಪಿಇಎಸ್ ಯೂನಿವರ್ಸಿಟಿಯಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Advertisement

ಪರೀಕ್ಷೆಗೆ ತಡವಾಗಿ ಬಂದಿದ್ದಕ್ಕಾಗಿ ನಿಂದಿಸಿದ್ದರಿಂದ ನೊಂದ ಈತ, ಕಾಲೇಜಿನ 6ನೇ ಅಂತಸ್ತಿನಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪಿಇಎಸ್ ಯೂನಿವರ್ಸಿಟಿಯಲ್ಲಿ ನಿನ್ನೆ ಮಧ್ಯಾಹ್ನ ಘಟನೆ ನಡೆದಿದೆ.

ಮೂಲತಃ ಆಂಧ್ರಪ್ರದೇಶದ ಕರ್ನೂಲಿನ ಕುಟುಂಬದ ಕರಸಾಲ ರಾಹುಲ್(21) ಮೃತ ವಿಧ್ಯಾರ್ಥಿ. ಕೆಲ ವರ್ಷಗಳಿಂದ ಇವರ ಕುಟುಂಬ ಬಳ್ಳಾರಿಯಲ್ಲಿ ನೆಲೆಸಿತ್ತು. ಈತ ಬಿಇ ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡುತ್ತಿದ್ದು, ಐದನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದನು.

Advertisement

ರಾಹುಲ್ ತನ್ನ ತಾಯಿಯೊಂದಿಗೆ ಕ್ಯಾಂಪಸ್‌ನಿಂದ 4 ಕಿಮೀ ದೂರದಲ್ಲಿರುವ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದನು. ಪರೀಕ್ಷೆ 8.30ಕ್ಕೆ ಆರಂಭವಾಗಲಿದ್ದ ಕಾರಣ 7.30ರ ಸುಮಾರಿಗೆ ಮನೆಯಿಂದ ಹೊರಟಿದ್ದ. ಆತನ ತಾಯಿ ಕಾಲೇಜು ಶಿಕ್ಷಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ ಪರೀಕ್ಷೆಗೆ ತಡವಾಗಿ ಬಂದ ಕಾರಣ ಪ್ರವೇಶ ನಿರಾಕರಿಸಲಾಗಿತ್ತು. ಅಧ್ಯಯನದಲ್ಲಿ ಅತ್ಯುತ್ತಮವಾಗಿ ನಿರ್ವಹಿಸುತ್ತಿದ್ದ ರಾಹುಲ್, ಇದರಿಂದ ನೊಂದಿದ್ದ ಎನ್ನಲಾಗಿದೆ.

ನಂತರ ಸ್ವಲ್ಪ ಹೊತ್ತಿನ ಬಳಿಕ ಕಾಲೇಜಿನ ಐದನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿದ್ದಾರೆ.

 

Advertisement
Tags :
BANGALORELatestNewsNewsKarnatakaSUICIDE
Advertisement
Next Article