ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಸ್ತೆ ಅಪಘಾತ: ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಬೈಕ್ ಸ್ಕಿಡ್ ಆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟ ಹಾಗೂ ಸಹಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ.
12:08 PM Feb 23, 2024 IST | Ashika S

ಉಡುಪಿ: ಬೈಕ್ ಸ್ಕಿಡ್ ಆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟ ಹಾಗೂ ಸಹಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ.

Advertisement

ಬ್ರಹ್ಮಾವರ ನಿವಾಸಿ ಆಕಾಶ್ ಕಾಂಚನ್(18) ಮೃತ ವಿದ್ಯಾರ್ಥಿ. ನಿಟ್ಟೆಯ ಖಾಸಗಿ ಕಾಲೇಜಿನಲ್ಲಿ ಮೆಕ್ಯಾನಿಕ್ ಇಂಜಿನಿಯರಿಂಗ್ ಓದುತಿದ್ದ ಇವರು ಕಾಲೇಜಿನಲ್ಲಿ ವಾರ್ಷಿಕೋತ್ಸವ ಇದ್ದ ಕಾರಣ ಸ್ನೇಹಿತರೊಡಗೂಡಿ ಪ್ರತ್ಯೇಕ ಬೈಕ್‌ಗಳಲ್ಲಿ ತೆರಳುತಿದ್ದ ವೇಳೆ ಘಟನೆ ಸಂಭವಿಸಿದೆ.

ಘಟನೆಯಲ್ಲಿ ಸವಾರ, ಸಹಸವಾರ ವಿದ್ಯಾರ್ಥಿಗಳಿಬ್ಬರು ರಸ್ತೆಗೆ ಎಸೆಯಲ್ಪಟ್ಟು ಆಕಾಶ್ ಗಂಭೀರ ಗಾಯಗೊಂಡು ಮೃತಪಟ್ಟರೆ, ಸಹಸವಾರ ವಿದ್ಯಾರ್ಥಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Tags :
LatetsNewsNewsKannadaಅಪಘಾತಇಂಜಿನಿಯರಿಂಗ್ ವಿದ್ಯಾರ್ಥಿಕಾರ್ಕಳ
Advertisement
Next Article