ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ: ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

ಬೆಂಗಳೂರಿನ ಹರಿಶ್ಚಂದ್ರ ಘಾಟ್​ ಬಳಿ ಬಿಎಂಟಿಸಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ.
12:50 PM Feb 02, 2024 IST | Ashika S

ಬೆಂಗಳೂರು: ಬೆಂಗಳೂರಿನ ಹರಿಶ್ಚಂದ್ರ ಘಾಟ್​ ಬಳಿ ಬಿಎಂಟಿಸಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ.

Advertisement

ಕೆಂಗೇರಿಯ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಎಂಜಿನಿಯರಿಂಗ್ ವ್ಯಾಸಂಗ ಮಾಡುತಿದ್ದ ಮಲ್ಲೇಶ್ವರ ನಿವಾಸಿ ಯುವತಿ ಕುಸುಮಿತಾ (21) ಮೃತಪಟ್ಟವರು.

ಮಲ್ಲೇಶ್ವರಂನಿಂದ ಹರಿಶ್ಚಂದ್ರಘಾಟ್​​​ಗೆ ಬೈಕ್ ನಲ್ಲಿ ಬರುತಿದ್ದ ಯುವತಿ, ಬಳಿಕ ಮೆಟ್ರೋ ಬಳಸಿ ಕಾಲೇಜಿಗೆ ತೆರಳುತಿದ್ದಳು. ಶುಕ್ರವಾರ ಸಹ ಎಂದಿನಂತೆಯೇ, ಮಲ್ಲೇಶ್ವರದಿಂದ ಹೊರಟಿದ್ದಳು. ಈ ವೇಳೆ ಅದೇ ಮಾರ್ಗದಲ್ಲಿ ಬಂದ ಬಸ್ ಆಕೆ ತೆರಳುತ್ತಿದ್ದ ಬೈಕ್​ಗೆ ಡಿಕ್ಕಿಹೊಡೆದಿದೆ. ಬಳಿಕ ಬೈಕ್ ಸಮೇತ ಎಳೆದೊಯ್ದಿದೆ.

Advertisement

ಬಳಿಕ ಗಾಯಾಗೊಂಡಿದ್ದ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೇ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ.

Advertisement
Tags :
LatetsNewsNewsKannadaಎಂಜಿನಿಯರಿಂಗ್ಬಿಎಂಟಿಸಿಬೈಕ್ ಡಿಕ್ಕಿಮೃತವಿದ್ಯಾರ್ಥಿನಿಸಾವುಹರಿಶ್ಚಂದ್ರ ಘಾಟ್
Advertisement
Next Article