ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಶಿವಮೊಗ್ಗದಲ್ಲಿ ಸ್ಪರ್ಧೆ ಖಚಿತವೆಂದ ಈಶ್ವರಪ್ಪ!

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತಮ್ಮ ಪುತ್ರನಿಗೆ ಅವಕಾಶ ಸಿಗದಿರುವುದಕ್ಕೆ ಅಸಮಾಧಾನಗೊಂಡು ಬಂಡಾಯ ಸಾರಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭೇಟಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರಾಕರಿಸಿದ್ದು, ಇದರೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯುವುದು ಖಚಿತ ಎಂದು ಈಶ್ವರಪ್ಪ ಅವರು ಹೇಳಿದ್ದಾರೆ.
09:19 AM Apr 04, 2024 IST | Ashitha S

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತಮ್ಮ ಪುತ್ರನಿಗೆ ಅವಕಾಶ ಸಿಗದಿರುವುದಕ್ಕೆ ಅಸಮಾಧಾನಗೊಂಡು ಬಂಡಾಯ ಸಾರಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭೇಟಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿರಾಕರಿಸಿದ್ದು, ಇದರೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯುವುದು ಖಚಿತ ಎಂದು ಈಶ್ವರಪ್ಪ ಅವರು ಹೇಳಿದ್ದಾರೆ.

Advertisement

ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ತಮ್ಮ ಅಸಮಾಧಾನ ವ್ಯಕ್ತಪಡಿಸುವ ಉದ್ದೇಶದಿಂದ ಈಶ್ವರಪ್ಪ ಬುಧವಾರ ದೆಹಲಿಗೆ ತೆರಳಿದ್ದರು. ಆದರೆ, ಅಮಿತ್ ಶಾ ಭೇಟಿ ಮಾಡಲು ಸಾಧ್ಯವಾಗಿಲ್ಲ.

ಕೇಂದ್ರ ಸಚಿವರ ಜೊತೆ ಸಭೆ ಸಾಧ್ಯವಾಗದಿರುವುದಕ್ಕೆ ದೆಹಲಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಈಶ್ವರಪ್ಪ ಅವರು, ಬುಧವಾರ ರಾತ್ರಿ 10 ಗಂಟೆಯ ನಂತರ ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿತ್ತು. ಆದರೆ, ಅಮಿತ್ ಶಾ ಅವರು ಭೇಟಿಗೆ ಲಭ್ಯವಿರುವುದಿಲ್ಲ ಎನ್ನುವ ಮಾಹಿತಿ ಬಂದಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಲೋಕಸಭೆ ಚುನಾವಣೆಯಲ್ಲಿ ಸೋಲಲಿ ಎನ್ನುವ ಅಪೇಕ್ಷೆ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಇರಬಹುದು ಎಂದು ಆರೋಪಿಸಿದರು.

Advertisement

ಇದೇ ವೇಳೆ ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದು ಖಚಿತ ಎಂದು ಹೇಳಿದರು.

 

Advertisement
Tags :
bengaluruBreakingNewsCongressGOVERNMENTKARNATAKALatestNewsNewsKarnatakaಈಶ್ವರಪ್ಪನವದೆಹಲಿ
Advertisement
Next Article