ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

5, 8, 9ನೇ ತರಗತಿ ಪರೀಕ್ಷೆ ಮುಂದೂಡಿಕೆ: ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ

ಶಿಕ್ಷಣ ಇಲಾಖೆ ಹಠಕ್ಕೆ ಬಿದ್ದಂತೆ 5,8,9 ಹಾಗೂ 11ನೇ ತರಗತಿಗೆ ಬೋರ್ಡ್ ಮಾದರಿಯ ಎಕ್ಸಂ ನಡೆಸಲು ಮುಂದಾಗಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಖಾಸಗಿ ಶಾಲೆಗಳ ಒಕ್ಕೂಟ ಶಿಕ್ಷಣ ಇಲಾಖೆಯ ನಡೆ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ರೂ ಕಳೆದ ವರ್ಷ ಕೋರ್ಟ್ ಶಿಕ್ಷಣ ಇಲಾಖೆ ಪರವೇ ಬ್ಯಾಟ ಬೀಸಿತ್ತು. ಆದರೆ ಈಗ ಇದನ್ನ ಪ್ರಶ್ನಿಸಿ ಮತ್ತೆ ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಹಾಗೂ ಕುಸುಮಾ ಸಂಘಟನೆ ಹೈಕೋರ್ಟ್ ಮೊರೆ ಹೋಗಿದ್ವು. ಮಕ್ಕಳಿಗೆ ಪಬ್ಲಿಕ್ ಮಾದರಿಯ ಪರೀಕ್ಷೆ ಬೇಡಾ ಅಂತಾ ವಾದ ಶುರು ಮಾಡಿದ್ದವು.
08:16 AM Mar 13, 2024 IST | Ashitha S

ಬೆಂಗಳೂರು: ಶಿಕ್ಷಣ ಇಲಾಖೆ ಹಠಕ್ಕೆ ಬಿದ್ದಂತೆ 5,8,9 ಹಾಗೂ 11ನೇ ತರಗತಿಗೆ ಬೋರ್ಡ್ ಮಾದರಿಯ ಎಕ್ಸಂ ನಡೆಸಲು ಮುಂದಾಗಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಖಾಸಗಿ ಶಾಲೆಗಳ ಒಕ್ಕೂಟ ಶಿಕ್ಷಣ ಇಲಾಖೆಯ ನಡೆ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ರೂ ಕಳೆದ ವರ್ಷ ಕೋರ್ಟ್ ಶಿಕ್ಷಣ ಇಲಾಖೆ ಪರವೇ ಬ್ಯಾಟ ಬೀಸಿತ್ತು. ಆದರೆ ಈಗ ಇದನ್ನ ಪ್ರಶ್ನಿಸಿ ಮತ್ತೆ ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಹಾಗೂ ಕುಸುಮಾ ಸಂಘಟನೆ ಹೈಕೋರ್ಟ್ ಮೊರೆ ಹೋಗಿದ್ವು. ಮಕ್ಕಳಿಗೆ ಪಬ್ಲಿಕ್ ಮಾದರಿಯ ಪರೀಕ್ಷೆ ಬೇಡಾ ಅಂತಾ ವಾದ ಶುರು ಮಾಡಿದ್ದವು.

Advertisement

ಈ ಬಗ್ಗೆ ಹೈಕೋರ್ಟ್ ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5,8,9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ಕಳೆದ ವಾರ ಅಂದ್ರೆ ಬುಧವಾರ ರದ್ದುಪಡಿಸಿ ಆದೇಶ ನೀಡಿತ್ತು. ಆದರೆ ಇದನ್ನ ಪ್ರಶ್ನಿಸಿ ಹೈಕೋರ್ಟ್ ಆದೇಶದ ವಿರುದ್ಧ ಶಿಕ್ಷಣ ಇಲಾಖೆ ಗುರುವಾರ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು ಇದಕ್ಕೆ ಹೈಕೋರ್ಟ್ ಪರೀಕ್ಷೆ ನಡೆಸಲು ಅವಕಾಶ ನೀಡಿತ್ತು .

ಇನ್ನು ಸರ್ಕಾರ ಮತ್ತು ಖಾಸಗಿ ಶಾಲೆಗಳ ನಡುವಿನ ಜಟಾಪಟಿಯ ಕಾರಣಕ್ಕೆ 5, 8 ಮತ್ತು 9ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಗೊಂದಲ ಮಯವಾಗಿದ್ದು ವಿದ್ಯಾರ್ಥಿ ಹಾಗೂ ಪೋಷಕರು ಪರದಾಡುವಂತಾಗಿದೆ. ಸರ್ಕಾರ ಮುಂದೆ ಪರೀಕ್ಷೆಗಳ ವಿಚಾರದಲ್ಲಿ ಯಾವ ಹೆಜ್ಜೆ ಇಡುತ್ತೆ ಅಂತಾ ಕಾದು ನೋಡಬೇಕಿದೆ

Advertisement

 

Advertisement
Tags :
ಸುತ್ತೋಲೆ
Advertisement
Next Article