ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಳ್ಳಂದೂರು ಶಾಲೆ ಆವರಣದಲ್ಲಿ ಸ್ಫೋಟಕ ಪತ್ತೆ

ನಗರದ ಬೆಳ್ಳಂದೂರು ಶಾಲೆ ವಠಾರದಲ್ಲಿ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಕೆಲವು ಸ್ಫೋಟಕಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
12:07 PM Mar 19, 2024 IST | Chaitra Kulal
ಬೆಳ್ಳಂದೂರು ಶಾಲೆ ಆವರಣದಲ್ಲಿ ಸ್ಫೋಟಕ ಪತ್ತೆ

ಬೆಂಗಳೂರು: ನಗರದ ಬೆಳ್ಳಂದೂರು ಶಾಲೆ ವಠಾರದಲ್ಲಿ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಕೆಲವು ಸ್ಫೋಟಕಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.  ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Advertisement

ಸ್ಫೋಟಕಗಳನ್ನು ಬೆಂಗಳೂರಿನ ಪ್ರಕ್ರಿಯಾ ಶಾಲೆ ಮುಂಭಾಗದ ಖಾಲಿ ಜಮೀನಿನಲ್ಲಿ ಟ್ರಾಕ್ಟರ್ ನಲ್ಲಿ ಇಡಲಾಗಿತ್ತು. ಮೆಲ್ನೋಟಕ್ಕೆ ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳ ಸ್ಫೋಟಿಸಲು ಸ್ಫೋಟಕಗಳನ್ನು ತಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅಕ್ರಮವಾಗಿ ಸ್ಫೋಟಕ ವಸ್ತು ಸಂಗ್ರಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ
ಬೆಂಗಳೂರಿನಲ್ಲಿ ಇತ್ತೀಚೆಗೆ ಅನೇಕ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ನಂತರ ಅದು ನಕಲಿ ಬೆದರಿಕೆ ಎಂಬ ಮಾಹಿತಿ ತಿಳಿದು ಬಂದಿದ್ದರೂ, ಬೆದರಿಕೆ ಸಂದೇಶದ ಹಿಂದೆ ವಿದೇಶಿ ಉಗ್ರ ಸಂಘಟನೆಗಳ ಕೈವಾಡ ಇರುವ ಬಗ್ಗೆ ಸಂದೇಹ ವ್ಯಕ್ತವಾಗಿತ್ತು. ಇಂತಹ ಸಂದರ್ಭದಲ್ಲಿ ಬೆಂಗಳೂರಿನ ಶಾಲೆಯ ಆವರಣದಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿರುವುದು ಆತಂಕ ಸೃಷ್ಟಿಗೆ ಕಾರಣವಾಗಿದೆ.

Advertisement

Advertisement
Tags :
BANGALOREcrimeKARNATAKALatestNewsNewsKarnataka
Advertisement
Next Article