For the best experience, open
https://m.newskannada.com
on your mobile browser.
Advertisement

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ ಸೃಷ್ಟಿಸಿದ್ದಕ್ಕಾಗಿ  ಪ್ರಯಾಣಿಕರೊಬ್ಬರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿದ ಘಟನೆ ನಡೆದಿದೆ.
01:07 PM May 18, 2024 IST | Ashika S
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ  ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರು: ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ ಸೃಷ್ಟಿಸಿದ್ದಕ್ಕಾಗಿ  ಪ್ರಯಾಣಿಕರೊಬ್ಬರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿದ ಘಟನೆ ನಡೆದಿದೆ.

Advertisement

ಪ್ರಯಾಣಿಕ ರಾಜೇಶ್‌ಕುಮಾರ್ ಬೇನಿವಾಲ್ ವಿರುದ್ಧ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಯಾನ ಸಂಸ್ಥೆಯ ಸಿಬ್ಬಂದಿ ವಿಮಾನ ನಿಲ್ದಾಣ ಪೊಲೀಸರಿಗೆ ದೂರು ನೀಡಿದ್ದರು.

ಹರಿಯಾಣದ ಹಿಸ್ಸಾರ್ ಜಿಲ್ಲೆಯ ನಿವಾಸಿಯಾದ ಬೇನಿವಾಲ್ ವಿಮಾನ ಸಂಖ್ಯೆ 15 821 ರಲ್ಲಿ ಪ್ರಯಾಣಿಸಲು ಮುಂದಾಗಿದ್ದ. ಪ್ರಯಾಣಿಕರು ಬ್ಯಾಗ್‌ಗಳನ್ನು ತಪಾಸಣೆಗಾಗಿ ಏರ್‌ಲೈನ್‌ನ ಚೆಕ್-ಇನ್ ಕೌಂಟರ್‌ನಲ್ಲಿ ಹಸ್ತಾಂತರಿಸುತ್ತಿದ್ದಾಗ ಬೇನಿವಾಲ್ ತನ್ನ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಗಟ್ಟಿಯಾಗಿ ಹೇಳಿದ್ದಾನೆ. ವಿಮಾನಯಾನ ಸಿಬ್ಬಂದಿ ತಕ್ಷಣವೇ ವಿಮಾನ ನಿಲ್ದಾಣದ ಭದ್ರತಾ ಏಜೆನ್ಸಿಗಳಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

ನಂತರ ಬೇನಿವಾಲ್​ರನ್ನು ಇತರ ಪ್ರಯಾಣಿಕರಿಂದ ಪ್ರತ್ಯೇಕಿಸಿ ತನಿಖೆಗೆ ಒಳಪಡಿಸಲಾಯಿತು. ಆತನ ಬ್ಯಾಗ್‌ಗಳನ್ನು ತೀವ್ರ ಪರಿಶೀಲನೆಗೆ ಒಳಪಡಿಸಲಾಯಿತು. ಈ ವೇಳೆ ಆತನ ಬೆದರಿಕೆ ಹುಸಿ ಎಂಬುದು ತಿಳಿದುಬಂದಿದೆ ಎಂದು ಮೂಲಗಳು ತಿಳಿಸಿವೆ.

Advertisement
Tags :
Advertisement