ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪರಶುರಾಮ ಥೀಮ್ ಪಾರ್ಕ್ ನಲ್ಲಿ‌ ನಕಲಿ ಕಂಚಿನ ಪ್ರತಿಮೆ ವಿವಾದ: ತನಿಖೆಗೆ ಸಿಎಂ ಸೂಚನೆ

ಜಿಲ್ಲೆಯಲ್ಲಿ ನಡೆದಿರುವ ಬೈಲೂರು ಪರಶುರಾಮ ಥೀಂ ಪಾರ್ಕ್ ನ ನಕಲಿ ಪ್ರತಿಮೆ ಪ್ರತಿಷ್ಠಾಪನೆ ವಿಚಾರ ಹಾಗೂ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅವ್ಯವಹಾರದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿಕೆ ನೀಡಿದ್ದಾರೆ.
06:25 PM Nov 20, 2023 IST | Ashika S

ಉಡುಪಿ: ಜಿಲ್ಲೆಯಲ್ಲಿ ನಡೆದಿರುವ ಬೈಲೂರು ಪರಶುರಾಮ ಥೀಂ ಪಾರ್ಕ್ ನ ನಕಲಿ ಪ್ರತಿಮೆ ಪ್ರತಿಷ್ಠಾಪನೆ ವಿಚಾರ ಹಾಗೂ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಅವ್ಯವಹಾರದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿಕೆ ನೀಡಿದ್ದಾರೆ.

Advertisement

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಶುರಾಮ ಥೀಂ ಪಾರ್ಕ್ ನ ನಕಲಿ ಪ್ರತಿಮೆಯ ವಿಚಾರವಾಗಿ ಹಾಗೂ ಬ್ರಹ್ಮಾವರ ಸಕ್ಕರೆ ಕಾರ್ಖಾನೆಯ ಗುಜರಿ ಮಾರಾಟದಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೆ ತರಲಾಗಿದೆ.

ಈ ಹಿನ್ನೆಲೆಯಲ್ಲಿ ಆಗಿರುವ ಅವ್ಯವಹಾರ ಕುರಿತು ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಸಿಎಂ ಸೂಚಿಸಿದ್ದಾರೆ ಎಂದು ಭಂಡಾರಿ ಹೇಳಿದರು.

Advertisement

ಗಂಗೊಳ್ಳಿಯಲ್ಲಿ ನಡೆದಿರುವ ಅಗ್ನಿ ದುರಂತದ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದ್ದು, ತಾಂತ್ರಿಕ ಸಮಸ್ಯೆ ಇದ್ದರೂ ಗರಿಷ್ಟ ಪ್ರಮಾಣದ ಪರಿಹಾರ ದೊರಕಿಸುವ ಭರವಸೆ ಸಿಎಂ ನೀಡಿದ್ದಾರೆ ಎಂದರು.

Advertisement
Tags :
LatetsNewsNewsKannadaಥೀಂ ಪಾರ್ಕ್ಪರಶುರಾಮಮಂಜುನಾಥ್ ಭಂಡಾರಿವಿಧಾನ ಪರಿಷತ್‌
Advertisement
Next Article