ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆ

ಹೈದರಾಬಾದ್​​ನಲ್ಲಿ ಸರ್ಕಾರಿ ಸ್ವಾಮ್ಯದ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆಯಾಗಿದ್ದು, 2 ಕೋಟಿ ರೂ. ಮೌಲ್ಯದ ಸಾಮಾಗ್ರಿ ವಶಕ್ಕೆ ಪಡೆಯಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.
06:25 PM Jan 13, 2024 IST | Ashika S

ಬೆಂಗಳೂರು: ಹೈದರಾಬಾದ್​​ನಲ್ಲಿ ಸರ್ಕಾರಿ ಸ್ವಾಮ್ಯದ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕಾ ಘಟಕ ಪತ್ತೆಯಾಗಿದ್ದು, 2 ಕೋಟಿ ರೂ. ಮೌಲ್ಯದ ಸಾಮಾಗ್ರಿ ವಶಕ್ಕೆ ಪಡೆಯಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

Advertisement

ಬಂಧಿತರನ್ನು ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂದು ಗುರುತಿಸಲಾಗಿದೆ.

ನಕಲಿ ಉತ್ಪನ್ನ, ಪ್ಯಾಕಿಂಗ್​ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಸೇರಿದಂತೆ ಸಾಮಾಗ್ರಿಗಳು ಪತ್ತೆಯಾಗಿವೆ.

Advertisement

ನಕಲಿ ಮೈಸೂರ್ ಸ್ಯಾಂಡಲ್ ಸಾಬೂನು ಹೈದರಾಬಾದ್ ಮಾರುಕಟ್ಟೆಗೆ ಪೂರೈಕೆಯಾಗುತ್ತಿರುವ ಬಗ್ಗೆ ಸಚಿವ ಎಂಬಿ. ಪಾಟೀಲ್​​ಗೆ ಅನಾಮಧೇಯ ಕರೆ ಬಂದಿತ್ತು, ಆ ಮೂಲಕ ಕಾರ್ಖಾನೆ ಎಂಡಿ ಡಾ. ಪ್ರಶಾಂತ್​ಗೆ ನಿಗಾ ವಹಿಸಲು ಸೂಚಿಸಿದ್ದರು.

ಸ್ವತಃ 1 ಲಕ್ಷ ರೂಪಾಯಿ ಬೆಲೆಯ ಉತ್ಪನ್ನ ಖರೀದಿಸಿ ಮೂಲ ಪತ್ತೆಗೆ ಕೆಎಸ್​ಡಿಎಲ್ ಸಿಬ್ಬಂದಿ ಮುಂದಾಗಿದ್ದರು.ಸ್ವತಃ ತಾವೇ ವಾಹನದಲ್ಲಿ ಸಾಗಿಸುವ ನೆಪದಲ್ಲಿ ಉತ್ಪಾದನೆ ಮಾಡುತ್ತಿದ್ದ ಸ್ಥಳಕ್ಕೆ ತೆರಳಿ ಪತ್ತೆ ಹಚ್ಚಿದ್ದಾರೆ.

Advertisement
Tags :
LatetsNewsNewsKannadaತಯಾರಿಕಾ ಘಟಕಪತ್ತೆಮೈಸೂರು ಸ್ಯಾಂಡಲ್ ಸೋಪ್ವಶಸರ್ಕಾರಿಹೈದರಾಬಾದ್
Advertisement
Next Article