ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆರ್‌ಸಿಬಿಯಿಂದ ಕೊಹ್ಲಿಯನ್ನು ಕೈಬಿಡಿ ಎಂದ ಫ್ಯಾನ್ಸ್: ಒಂದೊಳ್ಳೆ ಕಾರಣ ಇದೆ

17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಚೊಚ್ಚಲ ಶತಕ ಸಿಡಿಸಿ ಸಂಭ್ರಮಿಸಿದರು. ಇದರ ಹೊರತಾಗಿಯೂ ರಾಜಸ್ಥಾನ ರಾಯಲ್ಸ್ ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹೀನಾಯ ಸೋಲು ಅನುಭವಿಸಿತು. ಇದರ ಬೆನ್ನಲ್ಲೇ ಆರ್‌ಸಿಬಿ ಮ್ಯಾನೇಜ್‌ಮೆಂಟ್ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ
03:27 PM Apr 07, 2024 IST | Ashitha S

ಜೈಪುರ: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಚೊಚ್ಚಲ ಶತಕ ಸಿಡಿಸಿ ಸಂಭ್ರಮಿಸಿದರು. ಇದರ ಹೊರತಾಗಿಯೂ ರಾಜಸ್ಥಾನ ರಾಯಲ್ಸ್ ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಹೀನಾಯ ಸೋಲು ಅನುಭವಿಸಿತು. ಇದರ ಬೆನ್ನಲ್ಲೇ ಆರ್‌ಸಿಬಿ ಮ್ಯಾನೇಜ್‌ಮೆಂಟ್ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Advertisement

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಳೆದ 16 ಆವೃತ್ತಿಗಳನ್ನು ಆಡಿದ್ದರೂ ಒಮ್ಮೆಯೂ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ವಿರಾಟ್ ಕೊಹ್ಲಿ ಚೊಚ್ಚಲ ಆವೃತ್ತಿಯಿಂದಲೂ ಆರ್‌ಸಿಬಿ ತಂಡದ ಭಾಗವಾಗಿದ್ದು, ಪ್ರತಿ ಬಾರಿಯೂ ತಂಡದ ಗೆಲುವಿಗೆ ಶಕ್ತಿ ಮೀರಿ ಹೋರಾಡುತ್ತಲೇ ಇದ್ದಾರೆ. ಹೀಗಿದ್ದೂ ಉಳಿದ ಆಟಗಾರರ ವೈಫಲ್ಯತೆಯಿಂದಾಗಿ ಆರ್‌ಸಿಬಿ ಕಪ್ ಗೆಲ್ಲಲು ಸಾಧ್ಯವಾಗುತ್ತಿಲ್ಲ.

ಪ್ರೀತಿಯ ಆರ್‌ಸಿಬಿ, ದಯವಿಟ್ಟು ನೀವು ಮುಂದಿನ ವರ್ಷಕ್ಕೆ ವಿರಾಟ್ ಕೊಹ್ಲಿಯನ್ನು ರೀಟೈನ್ ಮಾಡಿಕೊಳ್ಳಬೇಡಿ. ನಾವು ಅವರನ್ನು ಈ ರೀತಿ ಇರುವುದನ್ನು ನೋಡಲು ಬಯಸುವುದಿಲ್ಲ ಎಂದು ಮನವಿ ಮಾಡಿಕೊಂಡಿದ್ದಾರೆ.

Advertisement

17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆರ್‌ಸಿಬಿ ಪರ ವಿರಾಟ್ ಕೊಹ್ಲಿ ಕಳೆದ ಐದು ಪಂದ್ಯಗಳಿಂದ ಏಕಾಂಗಿಯಾಗಿ 316 ರನ್ ಬಾರಿಸಿದ್ದಾರೆ. ಇನ್ನುಳಿದ ಆರ್‌ಸಿಬಿಯ ಎಲ್ಲಾ ಆಟಗಾರರು ಸೇರಿ ಇದುವರೆಗೂ 496 ರನ್ ಬಾರಿಸಿದ್ದಾರೆ.

Advertisement
Tags :
indiaIPLJusticeForFansKARNATAKALatestNewsNewsKarnatakaRCBvirat
Advertisement
Next Article