For the best experience, open
https://m.newskannada.com
on your mobile browser.
Advertisement

ಫೆ.16 ರಂದು ಭಾರತ ಬಂದ್​ಗೆ ಕರೆ ನೀಡಿದ ರೈತ ಸಂಘಟನೆಗಳು

ಹಲವು ಬೇಡಿಕೆಗಳ ಈಡೇರಿಕೆಗಾಗಿ ದೆಹಲಿ ಚಲೋ ಚಳವಳಿಯನ್ನು ಹಮ್ಮಿಕೊಂಡಿದ್ದ ಸಂಯುಕ್ತ ಕಿಸಾನ್ ಮೋರ್ಚಾ ಇದೀಗ ಫೆಬ್ರವರಿ 16ರಂದು ಗ್ರಾಮೀಣ ಭಾರತ ಬಂದ್​ಗೆ ಕರೆ ನೀಡಿದೆ.
01:41 PM Feb 14, 2024 IST | Ashitha S
ಫೆ 16 ರಂದು ಭಾರತ ಬಂದ್​ಗೆ ಕರೆ ನೀಡಿದ ರೈತ ಸಂಘಟನೆಗಳು

ದೆಹಲಿ: ಹಲವು ಬೇಡಿಕೆಗಳ ಈಡೇರಿಕೆಗಾಗಿ ದೆಹಲಿ ಚಲೋ ಚಳವಳಿಯನ್ನು ಹಮ್ಮಿಕೊಂಡಿದ್ದ ಸಂಯುಕ್ತ ಕಿಸಾನ್ ಮೋರ್ಚಾ ಇದೀಗ ಫೆಬ್ರವರಿ 16ರಂದು ಗ್ರಾಮೀಣ ಭಾರತ ಬಂದ್​ಗೆ ಕರೆ ನೀಡಿದೆ.

Advertisement

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಬ್ಯಾನರ್‌ನಡಿಯಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳೊಂದಿಗೆ ರೈತ ಸಂಘಗಳು ತಮ್ಮ ಇತರ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿರಿಸಲು ಫೆಬ್ರವರಿ 16 ರಂದು ದೇಶಾದ್ಯಂತ ಗ್ರಾಮೀಣ ಭಾರತ್ ಬಂದ್ ಎಂದು ಕರೆಯಲಾಗುವ ಮುಷ್ಕರಕ್ಕೆ ಕರೆ ನೀಡಿವೆ. ಎಸ್‌ಕೆಎಂ ಮತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಗ್ರಾಮೀಣ ಭಾರತ್ ಬಂದ್ ಫೆಬ್ರವರಿ 16 ರಂದು ಬೆಳಗ್ಗೆ 6 ರಿಂದ ಸಂಜೆ 4 ರವರೆಗೆ ನಡೆಯಲಿದೆ.

ಇನ್ನು ಫೆಬ್ರವರಿ 16 ರಂದು ದಿನವಿಡೀ ಭಾರತ್ ಬಂದ್‌ನಲ್ಲಿ, ಸಾರಿಗೆ, ಕೃಷಿ ಚಟುವಟಿಕೆಗಳು, MNREGA ಗ್ರಾಮೀಣ ಕೆಲಸಗಳು, ಖಾಸಗಿ ಕಚೇರಿಗಳು, ಹಳ್ಳಿ ಅಂಗಡಿಗಳು ಮತ್ತು ಗ್ರಾಮೀಣ ಕೈಗಾರಿಕಾ ಮತ್ತು ಸೇವಾ ವಲಯದ ಸಂಸ್ಥೆಗಳು ಮುಚ್ಚಲ್ಪಡುತ್ತವೆ. ಇದಲ್ಲದೆ, ಮುಷ್ಕರದ ಸಮಯದಲ್ಲಿ ಆಂಬ್ಯುಲೆನ್ಸ್‌ಗಳ ಕಾರ್ಯಾಚರಣೆ, ಪತ್ರಿಕೆ ವಿತರಣೆ, ಮದುವೆ, ಮೆಡಿಕಲ್ ಶಾಪ್‌ಗಳು, ಬೋರ್ಡ್ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಇತ್ಯಾದಿ ತುರ್ತು ಸೇವೆಗಳನ್ನು ನಿಲ್ಲಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Advertisement

Advertisement
Tags :
Advertisement