ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ಸಂಘಟನೆಗಳ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಫ್ರೀಡಂಪಾರ್ಕ್​ನಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.
01:32 PM Feb 06, 2024 IST | Ashitha S

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಫ್ರೀಡಂಪಾರ್ಕ್​ನಲ್ಲಿ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.

Advertisement

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಭಾಗಿಯಾಗಿದೆ. ತೆಲಂಗಾಣ ಮಾದರಿಯಲ್ಲಿ ರಾಜ್ಯದಲ್ಲೂ ರೈತರ ಸಾಲಮನ್ನಾ ಮಾಡಬೇಕು. ತಮಿಳುನಾಡಿಗೆ ನೀರು ಹರಿಸಿದ್ದರಿಂದ ಕಾವೇರಿ ವ್ಯಾಪ್ತಿಯಲ್ಲಿ ಬೆಳೆನಾಶವಾಗಿದೆ. ಹೀಗಾಗಿ ರೈತರಿಗೆ ಎಕರೆಗೆ ಕನಿಷ್ಠ ₹25,000 ಪರಿಹಾರ ನೀಡಬೇಕು. ಬಗರ್ ಹುಕುಂ ಸಾಗುವಳಿ ರೈತರಿಗೆ ಸಾಗುವಳಿ ಪತ್ರ ನೀಡುವುದು ಸೇರಿ ಹಲವು ಬೇಡಿಕೆಗಳನ್ನು ಮುಂದಿನ ಬಜೆಟ್​ನಲ್ಲೇ ಘೋಷಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕು, ರೈತರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ನೀಡುವ ಯೋಜನೆ ಜಾರಿಮಾಡಬೇಕು, ಕಬ್ಬಿನ ಎಫ್ ಆರ್ ಪಿ ದರ ರೈತನ ಹೊಲದಲ್ಲಿನ ದರ ಎಂದು ಬದಲಾಗಬೇಕು, ಆಕಸ್ಮಿಕ, ಅಪಘಾತ ಸಾವು, ಆತ್ಮಹತ್ಯೆಗೆ ಒಳಗಾದ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ನೀಡಬೇಕು,
ರಾಜ್ಯದ ಎಲ್ಲಾ ಹೋಬಳಿ ಕೇಂದ್ರಗಳಲ್ಲಿ ಎಂ ಎಸ್ ಪಿ ಖರೀದಿ ಕೇಂದ್ರ ತೆರೆಯಬೇಕು ಹಾಗೂ 8 ಲಕ್ಷಕ್ಕೂ ಹೆಚ್ಚು ಬಗರ್ ಹುಕ್ಕುಂ ಸಾಗುವಳಿ ರೈತರಿಗೆ ಸಾಗುವಳಿ ಪತ್ರ ನೀಡಬೇಕು ಹೀಗೆ ಹಲವು ಬೇಡಿಕೆಗಳನ್ನು ಮುಂದುಟ್ಟುಕೊಂಡು ಪ್ರತಿಭಟಿಸುತ್ತಿದ್ದಾರೆ.

Advertisement

Advertisement
Tags :
GOVERNMENTindiaKARNATAKALatestNewsNewsKannadaಪ್ರತಿಭಟನೆಬೆಂಗಳೂರುರೈತ
Advertisement
Next Article