For the best experience, open
https://m.newskannada.com
on your mobile browser.
Advertisement

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯವಾದ ವೇಗದ ಬೌಲರ್ ತಮ್ಮ ಕೊನೆಯ ಪಂದ್ಯವನ್ನು ಆಡಲಿದ್ದಾರೆ.
06:54 PM May 11, 2024 IST | Nisarga K
ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​   ಕಾರಣ ಇಲ್ಲಿದೆ
ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಬೆಂಗಳೂರು: ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯವಾದ ವೇಗದ ಬೌಲರ್ ತಮ್ಮ ಕೊನೆಯ ಪಂದ್ಯವನ್ನು ಆಡಲಿದ್ದಾರೆ.

Advertisement

ಅಂದ ಹಾಗೆ 41 ವರ್ಷದ ಅವರು ನಿವೃತ್ತಿ ಹೇಳುವುದಕ್ಕೆ ಕೋಚ್​ ಬ್ರೆಂಡನ್ ಮೆಕಲಮ್ ಕಾರಣ. ನೂತನ ತಂಡವನ್ನು ನಿರ್ಮಿಸುವ ಉದ್ದೇಶದಿಂದ ಅವರಿಗೆ ವಿದಾಯ ಹೇಳಲು ಸೂಚಿಸಿದ್ದಾರೆ ಎನ್ನಲಾಗಿದೆ.

2002ರ ಡಿಸೆಂಬರ್​ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ಆ್ಯಂಡರ್ಸನ್, ಸಾರ್ವಕಾಲಿಕ ಅತ್ಯುತ್ತಮ ವೇಗಿಗಳಲ್ಲಿ ಒಬ್ಬರಾಗಿದ್ದಾರೆ. ಬರ್ನ್ಲಿ ಮೂಲದ ಈ ಬೌಲರ್​ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಪಡೆದಷ್ಟು ವಿಕೆಟ್​ಗಳನ್ನು ಬೇರೆ ಯಾವುದೇ ವೇಗಿಗಳೂ ಪಡೆದಿಲ್ಲ. ಆಂಡರ್ಸನ್ 400 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 987 ವಿಕೆಟ್ ಪಡೆದಿದ್ದಾರೆ

Advertisement

Advertisement
Tags :
Advertisement