ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಫ್ಲಿಪ್‌ಕಾರ್ಟ್‌ನಲ್ಲಿ 1,100 ಉದ್ಯೋಗಿಗಳ ಕೆಲಸಕ್ಕೆ ಕುತ್ತು

ಇ-ಕಾಮರ್ಸ್ ಸಂಸ್ಥೆ ಫ್ಲಿಪ್‌ಕಾರ್ಟ್ ಕಳಪೆ ಕಾರ್ಯಕ್ಷಮತೆಯ ಆಧಾರದ ಮೇಲೆ ಸುಮಾರು 1,100 ಜನರನ್ನು ವಜಾಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ.
10:52 AM Jan 26, 2024 IST | Ashitha S

ಬೆಂಗಳೂರು: ಇ-ಕಾಮರ್ಸ್ ಸಂಸ್ಥೆ ಫ್ಲಿಪ್‌ಕಾರ್ಟ್ ಕಳಪೆ ಕಾರ್ಯಕ್ಷಮತೆಯ ಆಧಾರದ ಮೇಲೆ ಸುಮಾರು 1,100 ಜನರನ್ನು ವಜಾಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ.

Advertisement

ವಾಲ್‌ಮಾರ್ಟ್ ಸಮೂಹ ಸಂಸ್ಥೆ ಫ್ಲಿಪ್‌ಕಾರ್ಟ್ ಹಿಂದಿನ ಕ್ಯಾಲೆಂಡರ್ ವರ್ಷದಲ್ಲಿ ಮಾಡಿದ ಕೆಲಸದ ಆಧಾರದ ಮೇಲೆ ಜನವರಿ ಮತ್ತು ಫೆಬ್ರವರಿ ನಡುವೆ ಉದ್ಯೋಗಿಗಳ ಕಾರ್ಯಕ್ಷಮತೆ ಮೌಲ್ಯಮಾಪನಗಳನ್ನು ನಡೆಸುತ್ತದೆ.

"2023 ರ ಕಾರ್ಯಕ್ಷಮತೆ ಅಭಿವೃದ್ಧಿ ಚಕ್ರವು ಮುಗಿದ ನಂತರ ಒಟ್ಟು ಉದ್ಯೋಗಿಗಳ ಶೇಕಡಾ 5 ರಷ್ಟು ನಿರ್ಗಮನವನ್ನು ಕಾಣಬಹುದು. ಮೌಲ್ಯಮಾಪನವು ಜನವರಿಯಲ್ಲಿ ಪ್ರಾರಂಭವಾಗುತ್ತದೆ ಮತ್ತು ಸುಮಾರು ಒಂದೆರಡು ವಾರಗಳವರೆಗೆ ಇರುತ್ತದೆ" ಎಂದು ಮೂಲವೊಂದು ತಿಳಿಸಿದೆ. ಪ್‌ಕಾರ್ಟ್ ಸುಮಾರು 22,000 ಉದ್ಯೋಗಿಗಳನ್ನು ಹೊಂದಿದೆ ಮತ್ತು ಕಾರ್ಯಕ್ಷಮತೆಯ ಮೌಲ್ಯಮಾಪನದ ಪರಿಣಾಮವಾಗಿ ಸುಮಾರು 1,100 ಜನರು ಕಂಪನಿಯಿಂದ ಹೊರನಡೆಯುತ್ತಿದ್ದಾರೆ ಎನ್ನಲಾಗ್ತಿದೆ.

Advertisement

Advertisement
Tags :
indiaLatestNewsLayoffsNewsKannadaಉದ್ಯೋಗಿಫ್ಲಿಪ್‌ಕಾರ್ಟ್‌
Advertisement
Next Article