ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮುಂದಿನ ವಾರ ನಿಗಮ ಮಂಡಳಿ ನೇಮಕಾತಿ ಅಂತಿಮ ಪಟ್ಟಿ ರೆಡಿ: ಡಿಸಿಎಂ

ನಿಗಮ ಮಂಡಳಿ ಆಯ್ಕೆ ಕೈ ಹೈಕಮಾಂಡ್‌ ಗೆ ಭಾರಿ ತಲೆನೋವಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಮಂಗಳವಾರ ತಡರಾತ್ರಿವರೆಗೂ ಕೈ ಹೈ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲ ಅವರೊಂದಿಗೆ ಚರ್ಚೆ ನಡೆದರೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಇದೀಗ ಈ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ ಹೇಳಿಕೆ ನೀಡಿದ್ದಾರೆ.
08:55 PM Nov 22, 2023 IST | Ashika S

ಬೆಂಗಳೂರು: ನಿಗಮ ಮಂಡಳಿ ಆಯ್ಕೆ ಕೈ ಹೈಕಮಾಂಡ್‌ ಗೆ ಭಾರಿ ತಲೆನೋವಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಮಂಗಳವಾರ ತಡರಾತ್ರಿವರೆಗೂ ಕೈ ಹೈ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲ ಅವರೊಂದಿಗೆ ಚರ್ಚೆ ನಡೆದರೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಇದೀಗ ಈ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ ಹೇಳಿಕೆ ನೀಡಿದ್ದಾರೆ.

Advertisement

ಮುಂದಿನ ವಾರ ಮತ್ತೊಂದು ಸುತ್ತಿನ ಚರ್ಚೆಯ ನಂತರ ಆಡಳಿತಾರೂಢ ಕಾಂಗ್ರೆಸ್ ವಿವಿಧ ನಿಗಮ ಮಂಡಳಿಗಳಿಗೆ ನೇಮಕಾತಿಯನ್ನು ಅಂತಿಮಗೊಳಿಸಲಿದೆ ಮತ್ತು ನಂತರ ಪಟ್ಟಿಯನ್ನು ಪಕ್ಷದ ವರಿಷ್ಠರಿಗೆ ಕಳುಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಇಂದು ಕೂಡ ಅವರು(ಸುರ್ಜೇವಾಲಾ) ಚರ್ಚೆ ನಡೆಸಿದ್ದಾರೆ. ನಮ್ಮಲ್ಲಿ ಕೆಲವು ನಾಯಕರು ಸಹ ಅವರೊಂದಿಗೆ ಮಾತನಾಡುತ್ತಿದ್ದಾರೆ. ನಾವು ಕೆಲವು ಹಿರಿಯ ನಾಯಕರು ಮತ್ತು ಶಾಸಕರ ಅಭಿಪ್ರಾಯವನ್ನು ಕೇಳಿದ್ದೇವೆ. ಅವರು ನವೆಂಬರ್ 28 ರಂದು ಮತ್ತೆ ಬರುತ್ತಿದ್ದಾರೆ. ಈ ಮಧ್ಯೆ, ಮುಖ್ಯಮಂತ್ರಿ (ಸಿದ್ದರಾಮಯ್ಯ) ಮತ್ತು ನಾನು ಚುನಾವಣಾ ಪ್ರಚಾರಕ್ಕಾಗಿ ತೆಲಂಗಾಣಕ್ಕೆ ಹೋಗುತ್ತಿದ್ದೇವೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಶಿವಕುಮಾರ್ ಅವರು ಹೇಳಿದ್ದಾರೆ.

Advertisement

ಚುನಾವಣಾ ಪ್ರಚಾರ ಮುಗಿಸಿ ಸುರ್ಜೇವಾಲಾ ಅವರು ನ.28ರಂದು ನಗರಕ್ಕೆ ವಾಪಸಾಗಲಿದ್ದು, ಬಳಿಕ ಪಟ್ಟಿಯನ್ನು ಅಂತಿಮಗೊಳಿಸಿ ದೆಹಲಿಗೆ ಕಳುಹಿಸಲಾಗುವುದು ಎಂದು ಶಿವಕುಮಾರ ತಿಳಿಸಿದ್ದಾರೆ.

Advertisement
Tags :
LatetsNewsNewsKannadaಆಯ್ಕೆಡಿಸಿಎಂನಿಗಮ ಮಂಡಳಿಸುರ್ಜೆವಾಲಹೈಕಮಾಂಡ್
Advertisement
Next Article