ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಚಿವೆ ನಿರ್ಮಲಾ ಸೀತಾರಾಮನ್ ಆರ್​ಬಿಐ ಹೆಸರು ಹೇಳಿಕೊಂಡು ವಂಚನೆ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಹಾಗೂ ಆರ್​ಬಿಐ ಹೆಸರು ಹೇಳಿಕೊಂಡು ಬ್ಯಾಂಕ್​ಗಳಿಂದ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳು ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಬೆಂಗಳೂರು ಹೊರವಲಯದ ಆನೇಕಲ್  ತಾಲೂಕಿನಲ್ಲಿ ನಡೆದಿದೆ.
11:07 AM Feb 09, 2024 IST | Ashika S

ಆನೇಕಲ್: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಹಾಗೂ ಆರ್​ಬಿಐ ಹೆಸರು ಹೇಳಿಕೊಂಡು ಬ್ಯಾಂಕ್​ಗಳಿಂದ ಸಾಲ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬಳು ಹಲವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಬೆಂಗಳೂರು ಹೊರವಲಯದ ಆನೇಕಲ್  ತಾಲೂಕಿನಲ್ಲಿ ನಡೆದಿದೆ.

Advertisement

ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿಕೊಂಡಿರುವ ತಮಿಳುನಾಡಿನ ಹೊಸೂರು ಮೂಲದ ಪವಿತ್ರ ಆ್ಯಂಡ್ ಗ್ಯಾಂಗ್ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧ ಸೂರ್ಯನಗರ, ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪವಿತ್ರ, ಪ್ರವೀಣ್, ಯಲ್ಲಪ್ಪ, ಶೀಲ, ರುಕ್ಮಿಣಿ, ರಾಧ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಹಾಲ್ಬರ್ಟ್ ಮಾರ್ಟಿನ್, ಹೇಮಲತಾ, ಶಾಲಿನಿ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement

ಟ್ರಸ್​​ಗೆ ಆರ್​ಬಿಐನಿಂದ 17 ಕೋಟಿ ಬಂದಿರುವುದಾಗಿ ಹಾಗೂ ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಅವರ ಸಹಿ ಇರುವ ನಕಲಿ ಕಾಪಿ ತೋರಿಸಿ ಹಲವು ಕಡೆಗಳಲ್ಲಿ ನೂರಾರು ಜನವರಿಗೆ ವಂಚಿಸಿದ್ದಾಳೆ.

ಕಂತೆ ಕಂತೆ ಹಣದ ನೋಟುಗಳ ವಿಡಿಯೋಗಳನ್ನ ಕಳುಹಿಸಿ ಜನರನ್ನು ಮರುಳು ಮಾಡಿದ ಪವಿತ್ರಾ, ಒಬ್ಬರಿಗೆ 10 ಲಕ್ಷ ಲೋನ್ ನೀಡಿದರೆ ಅದರಲ್ಲಿ ಐದು ಲಕ್ಷ ಸಬ್ಸಿಡಿ ಎಂದು ನಂಬಿಸಿದ್ದಳು.

ಲೋನ್ ಬೇಕು ಅಂದರೆ ಮೊದಲು ಹಣ ಡೆಪಾಸಿಟ್ ಮಾಡಬೇಕೆಂದು ಕಥೆ ಕಟ್ಟಿದ್ದಾಳೆ. ಇದನ್ನು ನಂಬಿದ ಜನರು ಲಕ್ಷಾಂತರ ರೂಪಾಯಿ ಹಣ ನೀಡಿದ್ದಾರೆ. ಕೆಲವರು ಸಾಲ ಮಾಡಿ ಹಣ ನೀಡಿದ್ದಾರೆ.ಆದರೆ, ಕೆಲವು ತಿಂಗಳಾದರೂ ಲೋನ್ ಬಾರದೆ ಇದ್ದಾಗ ವಂಚಕಿ ಪವಿತ್ರಾಳ ಕಳ್ಳಾಟ ಬಯಲಾಗಿದೆ.

Advertisement
Tags :
LatetsNewsNewsKannadaಆರ್‌ಬಿಐನಿರ್ಮಲಾ ಸೀತಾರಾಮನ್‌ಪ್ರಕರಣಬ್ಯಾಂಕ್‌ವಂಚನೆ
Advertisement
Next Article