For the best experience, open
https://m.newskannada.com
on your mobile browser.
Advertisement

ಪಾಕ್ ಧ್ವಜ ಬಳಕೆ : ಸುವರ್ಣ ನ್ಯೂಸ್, ಅಜಿತ್ ಹನುಮಕ್ಕನವರ್ ವಿರುದ್ಧ ಎಫ್ಐಆರ್

ಸುದ್ದಿ ಬಿತ್ತರಿಸುವಾಗ ಹಿಂದೂಗಳ ಜನಸಂಖ್ಯೆ ತಿಳಿಸಲು ತ್ರಿವರ್ಣ ಧ್ವಜ ಮತ್ತು ಮುಸ್ಲಿಮರ ಜನಸಂಖ್ಯೆಗೆ ಪಾಕಿಸ್ತಾನದ ಧ್ವಜ ಬಳಕೆ ಮಾಡಿರುವ ಸುವರ್ಣ ನ್ಯೂಸ್ ಹಾಗೂ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
03:33 PM May 13, 2024 IST | Nisarga K
ಪಾಕ್ ಧ್ವಜ ಬಳಕೆ   ಸುವರ್ಣ ನ್ಯೂಸ್  ಅಜಿತ್ ಹನುಮಕ್ಕನವರ್ ವಿರುದ್ಧ ಎಫ್ಐಆರ್
ಪಾಕ್ ಧ್ವಜ ಬಳಕೆ : ಸುವರ್ಣ ನ್ಯೂಸ್, ಅಜಿತ್ ಹನುಮಕ್ಕನವರ್ ವಿರುದ್ಧ FIR

ಬೆಂಗಳೂರು: ಸುದ್ದಿ ಬಿತ್ತರಿಸುವಾಗ ಹಿಂದೂಗಳ ಜನಸಂಖ್ಯೆ ತಿಳಿಸಲು ತ್ರಿವರ್ಣ ಧ್ವಜ ಮತ್ತು ಮುಸ್ಲಿಮರ ಜನಸಂಖ್ಯೆಗೆ ಪಾಕಿಸ್ತಾನದ ಧ್ವಜ ಬಳಕೆ ಮಾಡಿರುವ ಸುವರ್ಣ ನ್ಯೂಸ್ ಹಾಗೂ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

Advertisement

ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತರಾಗಿರುವ ತನ್ವೀರ್ ಅಹ್ಮದ್ ನೀಡಿದ್ದ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಐಪಿಸಿ 1860ರ ಅಡಿಯಲ್ಲಿನ 505(2) ಸೆಕ್ಷನ್ ಗಳ ಅಡಿಯಲ್ಲಿ ದ್ವೇಷವನ್ನು ಸೃಷ್ಟಿಸಿದ ಅಥವಾ ಉತ್ತೇಜಿಸಲು ಯತ್ನಿಸಿರುವ ಬಗ್ಗೆ ಎಫ್ಐಆರ್ ದಾಖಲಿಸಿದ್ದಾರೆ.

ಏನಿದು ಪ್ರಕರಣ?
ಮೇ 9ರ ರಾತ್ರಿ 8.30ಕ್ಕೆ ಪ್ರಸಾರಗೊಂಡಿರುವ ಈ ಕಾರ್ಯಕ್ರಮವನ್ನು ಸುವರ್ಣ ನ್ಯೂಸ್ನ ಅಜಿತ್ ಹನುಮಕ್ಕನವರ್ ನಿರೂಪಿಸುತ್ತಿದ್ದರು. ಈ ಕಾರ್ಯಕ್ರಮದಲ್ಲಿ ಹಿಂದೂಗಳ ಜನಸಂಖ್ಯೆ ತಿಳಿಸಲು ಭಾರತದ ಧ್ವಜ, ಮುಸ್ಲಿಮರ ಜನ ಸಂಖ್ಯೆಯನ್ನು ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿರುವುದು ಕಂಡುಬಂದಿದೆ ಈ ಕಾರಣ ಎಫ್ಐಆರ್ ದಾಖಲಿಸಿದ್ದಾರೆ.

Advertisement

Advertisement
Tags :
Advertisement