For the best experience, open
https://m.newskannada.com
on your mobile browser.
Advertisement

ಶಾಸಕ ಮುನಿರತ್ನ ವಿರುದ್ಧ ಕಿಡ್ನಾಪ್ ಆರೋಪ: ಎಫ್‌ಐಆ‌ರ್ ದಾಖಲು

ಬಿಜೆಪಿಗೆ ಕಾಂಗ್ರೆಸ್‌ ಕಾರ್ಯಕರ್ತನನ್ನು ಬೆದರಿಸಿ ಸೇರ್ಪಡೆಗೊಳಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಂ.ಮುನಿರತ್ನ ಹಾಗೂ ಇತರರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
01:02 PM Apr 04, 2024 IST | Ashitha S
ಶಾಸಕ ಮುನಿರತ್ನ ವಿರುದ್ಧ ಕಿಡ್ನಾಪ್ ಆರೋಪ  ಎಫ್‌ಐಆ‌ರ್ ದಾಖಲು

ಬೆಂಗಳೂರು: ಬಿಜೆಪಿಗೆ ಕಾಂಗ್ರೆಸ್‌ ಕಾರ್ಯಕರ್ತನನ್ನು ಬೆದರಿಸಿ ಸೇರ್ಪಡೆಗೊಳಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಂ.ಮುನಿರತ್ನ ಹಾಗೂ ಇತರರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Advertisement

ಲಕ್ಷ್ಮೀದೇವಿ ನಗರದ ಪೇಂಟರ್ ಸ್ಯಾಮ್ಯುಯಲ್‌ ಆರೋಪ ಮಾಡಿದ್ದು, ಸಂತ್ರಸ್ತ ನೀಡಿದ ದೂರಿನ ಮೇರೆಗೆ ಮುನಿರತ್ನ ಹಾಗೂ ಅವರ ಬೆಂಬಲಿಗರಾದ ಸುರೇಶ್, ವಸಂತ್, ವಾಸೀಂ ಹಾಗೂ ಸೀನ ವಿರುದ್ಧ ಅಪಹರಣ ಆರೋಪದಡಿ ಪೊಲೀಸರು ಎಫ್ ಐಆರ್‌ ದಾಖಲಿಸಿದ್ದಾರೆ.

ಎರಡು ದಿನಗಳಿಂದ ಮಾತನಾಡುವ ನೆಪದಲ್ಲಿ ಶಾಸಕ ಮುನಿರತ್ನ ಅವರ ಕಚೇರಿಗೆ ಬಲವಂತವಾಗಿ ಶಾಸಕರ ಹಿಂಬಾಲಕರು ಕರೆದು ಕೊಂಡುಹೋಗಿ ಬೆದರಿಕೆ ಹಾಕಿ ಬಿಜೆಪಿ ಸೇರಿಸಿದ್ದರು ಎಂದು ಸಂತ್ರಸ್ತ ಆರೋಪಿಸಿದ್ದಾರೆ. ಆದರೆ ತಮ್ಮ ಮೇಲಿನ ಆರೋಪವನ್ನು ಶಾಸಕ ಮುನಿರತ್ನ ನಿರಾಕರಿಸಿದ್ದಾರೆ.

Advertisement

Advertisement
Tags :
Advertisement