ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದರು. ಅಲ್ಲದೇ ಪೊಲೀಸ್ ಠಾಣೆ ನಿಮ್ಮ‌ ಅಪ್ಪಂದಾ ಎಂದು ಬೆಳ್ತಂಗಡಿ PSI ಮುರುಳಿಧರ್ ನಾಯ್ಕ್ ಗೆ ಧಮ್ಕಿ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ  ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದೆ.
08:13 PM May 19, 2024 IST | Ashika S
ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ಮಂಗಳೂರು: ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದರು. ಅಲ್ಲದೇ ಪೊಲೀಸ್ ಠಾಣೆ ನಿಮ್ಮ‌ ಅಪ್ಪಂದಾ ಎಂದು ಬೆಳ್ತಂಗಡಿ PSI ಮುರುಳಿಧರ್ ನಾಯ್ಕ್ ಗೆ ಧಮ್ಕಿ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ  ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದೆ.

Advertisement

ಶಾಸಕ ಪೂಂಜಾ ಆಪ್ತರು ಅಕ್ರಮ ಕಲ್ಲುಗಣಿಕಾರಿಕೆ ನಡೆಸುತ್ತಿದ್ದ ಎಂಬ ಆರೋಪದ ಮೇಲೆ ಬೆಳ್ತಂಗಡಿಯ ಮೆಲಂತಬೆಟ್ಟುವಿನ ಕಲ್ಲಿನ ಕೋರೆಗೆ ತಹಶೀಲ್ದಾರ್ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿತ್ತು. ಈ ವೇಳೆ ಗುರುವಾಯನಕೆರೆಯ ಬಿಜೆಪಿಯ ಯುವಮೋರ್ಚಾದ ತಾಲೂಕು ಅಧ್ಯಕ್ಷ, ರೌಡಿಶೀಟರ್ ಶಶಿರಾಜ್ ಶೆಟ್ಟಿಯನ್ನು ಬಂಧಿಸಲಾಗಿತ್ತು. ಇದಕ್ಕೆ ಕೆರಳಿದ್ದ ಶಾಸಕರು ಹಾಗೂ ಬಿಜೆಪಿ ಕಾರ್ಯಕರ್ತರು ಬೆಳ್ತಂಗಡಿ ಠಾಣೆಯೆದುರು ರಾತ್ರೋರಾತ್ರಿ ಪ್ರತಿಭಟನೆ ನಡೆಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಪ್ರತಿಭಟನೆಯ ವೇಳೆ ಅಮಾಯಕನ ಬಂಧನವಾಗಿದ್ದನ್ನು ಖಂಡಿಸಿ ತಕ್ಷಣ ಬಿಡುಗಡೆ ಮಾಡಬೇಕಾಗಿ   ಪ್ರತಿಭಟನೆ  ನಡೆಸಿದರು  ಈ ವೇಳೆ ಪೊಲೀಸ್ ಹಾಗೂ ಇಲಾಖೆ ವಿರುದ್ಧ ಶಾಸಕರು ಅವಹೇಳನ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡರು.

Advertisement

Advertisement
Tags :
BJPFIELDFIRHARISH POONJALatestNewsMLANewsKarnataka
Advertisement
Next Article