ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಟ್ಟೆ ಅಂಗಡಿಗೆ ಬೆಂಕಿ: ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿ

ಬಟ್ಟೆ ಅಂಗಡಿಯಲ್ಲಿ ತಡರಾತ್ರಿ ಬೆಂಕಿ ಹೊತ್ತಿಕೊಂಡು ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಸುಟ್ಟು ಕರಕಲಾದ ಘಟನೆ ನಗರದ ಮಲ್ಲೇಶ್ವರಂನ ಸಂಪಿಗೆ ರಸ್ತೆ ಸಿಗ್ನಲ್‌ ಬಳಿ ನಡೆದಿದೆ.
07:25 AM Dec 19, 2023 IST | Ashika S

ಬೆಂಗಳೂರು: ಬಟ್ಟೆ ಅಂಗಡಿಯಲ್ಲಿ ತಡರಾತ್ರಿ ಬೆಂಕಿ ಹೊತ್ತಿಕೊಂಡು ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಸುಟ್ಟು ಕರಕಲಾದ ಘಟನೆ ನಗರದ ಮಲ್ಲೇಶ್ವರಂನ ಸಂಪಿಗೆ ರಸ್ತೆ ಸಿಗ್ನಲ್‌ ಬಳಿ ನಡೆದಿದೆ.

Advertisement

ಮೊದಲಿಗೆ  ಕಂಪ್ಯೂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಂಪ್ಯೂಟರ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಸಮೀಪದ ಬಟ್ಟೆಗೆ ತಗುಲಿ ಇಡೀ ಬಟ್ಟೆ ಅಂಗಡಿಯಲ್ಲಿದ್ದ ಎಲ್ಲ ಬಟ್ಟೆಗೆ ಬೆಂಕಿ ಹೊತ್ತಿಕಕೊಂಡು ಉರಿದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಿನ್ನೆ ರಾತ್ರಿ ವ್ಯಾಪಾರ ಮುಗಿಸಿ ಅಂಗಡಿ ಕ್ಲೋಸ್ ಮಾಡಿಕೊಂಡು ಮನೆಗೆ ತೆರಳುವಾಗ ಕಂಪ್ಯೂಟರ್ ಆನ್‌ ಮಾಡಿ ಹಾಗೆ ಹೋಗಿದ್ದರಿಂದ ಈ ಘಟನೆ ನಡೆದಿದೆ.
ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Advertisement
Advertisement
Tags :
LatetsNewsNewsKannadaಬಟ್ಟೆಬಟ್ಟೆ ಅಂಗಡಿಬೆಂಕಿರೂಪಾಯಿಲಕ್ಷಾಂತರ
Advertisement
Next Article