ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಶಾಪಿಂಗ್ ಮಾಲ್‌ನಲ್ಲಿ ಬೆಂಕಿ ಅವಘಡ: 11 ಮಂದಿ ಸಾವು

ಪಾಕಿಸ್ತಾನದ ಕರಾಚಿಯ ಬಹುಮಹಡಿ ಶಾಪಿಂಗ್ ಮಾಲ್‌ನಲ್ಲಿ ಶನಿವಾರ ಸಂಭವಿಸಿದ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
02:53 PM Nov 25, 2023 IST | Gayathri SG

ಕರಾಚಿ: ಪಾಕಿಸ್ತಾನದ ಕರಾಚಿಯ ಬಹುಮಹಡಿ ಶಾಪಿಂಗ್ ಮಾಲ್‌ನಲ್ಲಿ ಶನಿವಾರ ಸಂಭವಿಸಿದ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Advertisement

ಕರಾಚಿಯ ರಶೀದ್ ಮಿನ್ಹಾಸ್ ರಸ್ತೆಯಲ್ಲಿರುವ ಆರ್‌ಜೆ ಶಾಪಿಂಗ್ ಮಾಲ್‌ನಲ್ಲಿ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಜಿಯೋ ನ್ಯೂಸ್ ತಿಳಿಸಿದೆ.

ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಕೆಲವೇ ನಿಮಿಷದಲ್ಲಿ ಅಗ್ನಿಶಾಮಕ ದಳ ಸ್ಥಳಕ್ಕೆ ತೆರಳಿ 50 ಮಂದಿಯನ್ನು ರಕ್ಷಣೆ ಮಾಡಿದೆ. ಆದರೆ ಕಟ್ಟಡದಲ್ಲಿ ಇನ್ನು ಅನೇಕ ಜನ ಸಿಲುಕಿಕೊಂಡಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಬೆಂಕಿಯಲ್ಲಿ ಗಾಯಗೊಂಡ ಹಲವಾರು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಯೋ ವರದಿ ಮಾಡಿದೆ.

Advertisement

ಕರಾಚಿ ಮೇಯರ್ ಮುರ್ತಾಜಾ ವಹಾಬ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಘಟನೆಯಲ್ಲಿ ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ.

Advertisement
Tags :
BreakingNewsLatestNewsNewsKannadaಬೆಂಕಿ
Advertisement
Next Article