For the best experience, open
https://m.newskannada.com
on your mobile browser.
Advertisement

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ ಬಿದ್ದಿದ್ದು ಸುಮಾರು ನಾಲ್ಕು ಕೋಟಿ ರೂಪಾಯಿ ನಷ್ಟವಾಗಿದೆ.
03:13 PM May 10, 2024 IST | Ashika S
ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ  ನಾಲ್ಕು ಕೋಟಿ ನಷ್ಟ

ಹೈದರಾಬಾದ್: ತೆಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ ಬಿದ್ದಿದ್ದು ಸುಮಾರು ನಾಲ್ಕು ಕೋಟಿ ರೂಪಾಯಿ ನಷ್ಟವಾಗಿದೆ.

Advertisement

ಸೆಟ್​ಗೆ ಬೆಂಕಿ ಬಿದ್ದಾಗ ಶೂಟಿಂಗ್ ನಡೆಯುತ್ತಿರಲಿಲ್ಲವಾದ್ದರಿಂದ ಯಾರಿಗೂ ಯಾವುದೇ ಗಾಯ ಅಥವಾ ಜೀವಹಾನಿ ಸಂಭವಿಸಿಲ್ಲ ಎಂದು ಚಿತ್ರತಂಡ ತಿಳಿಸಿದೆ.

ಹೈದರಾಬಾದ್ ಹೊರವಲಯದಲ್ಲಿ ಒಂದೇ ಜಾಗದಲ್ಲಿ ಬೇರೆ ಬೇರೆ ಸೆಟ್​ಗಳನ್ನು ನಿರ್ಮಾಣ ಮಾಡಲಾಗಿತ್ತು. ಸೆಟ್ ನಿರ್ಮಾಣಕ್ಕೆ ಸುಮಾರು 4 ಕೋಟಿ ಖರ್ಚು ಮಾಡಲಾಗಿತ್ತು ಎನ್ನಲಾಗುತ್ತಿದೆ.

Advertisement

ಈ ಹೊಸ  ಸಿನಿಮಾದಲ್ಲಿ ಕಲ್ಯಾಣ್ ರಾಮ್ ಸಿಬಿಐ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಆಕ್ಷನ್ ದೃಶ್ಯಗಳ ಚಿತ್ರೀಕರಣ ಹಾಗೂ ಕೆಲವು ಕಚೇರಿ ದೃಶ್ಯಗಳ ಚಿತ್ರೀಕರಣವನ್ನು ಚಿತ್ರತಂಡ ಸೆಟ್​ನಲ್ಲಿ ಮಾಡುತ್ತಿತ್ತು.

Advertisement
Tags :
Advertisement