For the best experience, open
https://m.newskannada.com
on your mobile browser.
Advertisement

 ಗದ್ದೆಗೆ ಆಕಸ್ಮಿಕ‌ ಬೆಂಕಿ : ತಪ್ಪಿದ ಭಾರೀ ಅನಾಹುತ

ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಲಾಜಿ ಲೇಔಟ್ ಹಾಗೂ ಕನ್ನರ್ಪಾಡಿ ಸೈಂಟ್ ಮೇರಿಸ್ ಶಾಲೆಯ ಬಳಿ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಹೆಚ್ಚಿನ ಅನಾಹುತವೊಂದು ತಪ್ಪಿದೆ.
11:42 AM May 06, 2024 IST | Nisarga K
 ಗದ್ದೆಗೆ ಆಕಸ್ಮಿಕ‌ ಬೆಂಕಿ   ತಪ್ಪಿದ ಭಾರೀ ಅನಾಹುತ
 ಗದ್ದೆಗೆ ಆಕಸ್ಮಿಕ‌ ಬೆಂಕಿ : ತಪ್ಪಿದ ಭಾರೀ ಅನಾಹುತ

ಉಡುಪಿ: ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಲಾಜಿ ಲೇಔಟ್ ಹಾಗೂ ಕನ್ನರ್ಪಾಡಿ ಸೈಂಟ್ ಮೇರಿಸ್ ಶಾಲೆಯ ಬಳಿ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಹೆಚ್ಚಿನ ಅನಾಹುತವೊಂದು ತಪ್ಪಿದೆ.

Advertisement

ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಸಮಾಜ ಸೇವಕ, ಕಾಂಗ್ರೆಸ್ ಮುಖಂಡ ಕೆ. ಕೃಷ್ಣಮೂರ್ತಿ ಆಚಾರ್ಯ ಅವರು ಕೂಡಲೇ ಅಗ್ನಿ ಶಾಮಕದಳಕ್ಕೆ ಮಾಹಿತಿ ನೀಡಿದರು. ತಕ್ಷಣವೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಅಧಿಕಾರಿ ಹಾಗೂ ಸಿಬ್ಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಕಡೆಕಾರ್ ಗ್ರಾಮ ಪಂಚಾಯತ್ ಅಧ್ಯಕ್ಷ ಜಯಕರ್ ಶೇರಿಗಾರ್, ಉಪಾಧ್ಯಕ್ಷ ನವೀನ್ ಶೆಟ್ಟಿ ಸ್ಥಳೀಯ ಮುಖಂಡರಾದ ಅರುಣ್ ಶೆಟ್ಟಿ, ಕನ್ನರ್ಪಾಡಿ ಜಯದುರ್ಗಾ ಪರಮೇಶ್ವರಿ ಯುವಕಮಂಡಲದ ಸದಸ್ಯರು ಕಾರ್ಯಾಚರಣೆಗೆ ಸಹಕರಿಸಿದರು.

Advertisement

Advertisement
Tags :
Advertisement